
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತಿತರರು
ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹಲವು ಗ್ರಾಮಗಳಿಗೆ ನೀರು ಹರಿಸುವ ನುಗು ಹಾಗೂ ಹೇಡಿಯಾಳ ಏತ ನೀರಾವರಿ ಯೋಜನೆಗೆ ಚಾಲನೆ ದೊರೆತಿದೆ.
ನಂಜನಗೂಡಿನಲ್ಲಿಂದು ಶ್ರೀ ಕಂಠೇಶ್ವರ ದೇವಾಲಯದ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದ ಮುಖ್ಯಮಂತ್ರಿ, ನುಗು, ಹೇಡಿಯಾಳ ಏತ ನೀರಾವರಿ ಯೋಜನೆಗೆ ಚಾಲನೆ ನೀಡಿದರು, ಇದೇ ವೇಳೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದರು. ಸಂಸದ ಶ್ರೀನಿವಾಸ್ ಪ್ರಸಾದ್, ಸಚಿವ ಗೋವಿಂದ ಕಾರಜೋಳ, ಶಾಸಕ ಹರ್ಷವರ್ಧನ್ ಮತ್ತಿತರರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಮುಖ್ಯಮಂತ್ರಿ @BSBommai ಅವರು ಇಂದು ನಂಜನಗೂಡು ಶ್ರೀ ಕಂಠೇಶ್ವರ ದೇವಸ್ಥಾನದ ವಿವಿಧ ಕಾಮಗಾರಿ ಗಳ ಗುದ್ದಲಿ ಪೂಜೆ,ನುಗು ಹಾಗೂ ಹೇಡಿಯಾಳ ಏತ ನೀರಾವರಿ ಯೋಜನೆಗೆ ಚಾಲನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದರು.
— CM of Karnataka (@CMofKarnataka) November 28, 2022
1/2 pic.twitter.com/cP17Tckb14
ಸರಗೂರಿನ ತಾಲೂಕಿನ ಚಾಮೇಗೌಡನಹುಂಡಿ ಬಳಿ ಕಬಿನಿ ನದಿಯಿಂದ ಪಂಪ್ ಮೂಲಕ ನೀರನ್ನು ಎತ್ತಿ ನುಗು ನದಿಗೆ ಹರಿಸಿ ಅಣ್ಣೆಕಟ್ಟು ತುಂಬಿಸುವುದೇ ನುಗು ಏತ ನೀರಾವರಿ ಯೋಜನೆಯಾಗಲಿದೆ. ಇದರಿಂದ ತಾಲೂಕಿನ ಕರತಲೆ, ಮಸಗೆ, ಕಳಲೆ ಸೇರಿದಂತೆ ಸುಮಾರು 100ಕ್ಕೂ ಹೆಚ್ಚು ಗ್ರಾಮಗಳ ಹತ್ತು ಸಾವಿರ ಎಕರೆ ಪ್ರದೇಶಕ್ಕೆ ನೀರು ಲಭಿಸಲಿದೆ.
ಇದೇ ಸಂದರ್ಭದಲ್ಲಿ ರೈತರಿಂದ ಮನವಿ ಸ್ವೀಕರಿಸಿದ ಮುಖ್ಯಮಂತ್ರಿ, ಕಬ್ಬಿಗೆ ವೈಜ್ಞಾನಿಕ ದರ ನಿಗದಿ ಸಂಬಂಧ ಈಗಾಗಲೇ ಮೂರ್ನಾಲ್ಕು ಬಾರಿ ಸಭೆ ನಡೆಸಲಾಗಿದ್ದು, ದರ ಹೆಚ್ಚಳದ ಅಗತ್ಯತೆ ಕುರಿತು ಸಕ್ಕರೆ ಕಾರ್ಖಾನೆಯವರೊಂದಿಗೆ ಮಾತುಕತೆ ನಡೆಸಲಾಗಿದೆ ಎಂದು ತಿಳಿಸಿದರು.