ರೌಡಿ ಸುನೀಲ್ ಮುಂದೆ ಪೊಲೀಸರೇ ಸೈಲೆಂಟ್! ಪೊಲೀಸರಿಗಿಂತ ರೌಡಿಗಳೇ ಪ್ರಭಾವಿಗಳಾದರೆ? ಕಾಂಗ್ರೆಸ್ ತರಾಟೆ
ಬಿಜೆಪಿ ನಾಯಕರಿದ್ದ ವೇದಿಕೆಯಲ್ಲಿ ರೌಡಿ ಸೈಲೆಂಟ್ ಸುನೀಲ ಕಾಣಿಸಿಕೊಂಡಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ನೆಟ್ಟಿಗರು ನಾನಾ ರೀತಿಯಲ್ಲಿ ರಾಜ್ಯ ರಾಜಕೀಯವನ್ನು ವಿಶ್ಲೇಷಿಸುತ್ತಿದ್ದಾರೆ.
Published: 28th November 2022 04:56 PM | Last Updated: 29th November 2022 03:02 PM | A+A A-

ರೌಡಿ ಶೀಟರ್ ಸೈಲೆಂಟ್ ಸುನೀಲ್
ಬೆಂಗಳೂರು: ಬಿಜೆಪಿ ನಾಯಕರಿದ್ದ ವೇದಿಕೆಯಲ್ಲಿ ರೌಡಿ ಸೈಲೆಂಟ್ ಸುನೀಲ ಕಾಣಿಸಿಕೊಂಡಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ನೆಟ್ಟಿಗರು ನಾನಾ ರೀತಿಯಲ್ಲಿ ರಾಜ್ಯ ರಾಜಕೀಯವನ್ನು ವಿಶ್ಲೇಷಿಸುತ್ತಿದ್ದಾರೆ. ಇದರಿಂದ ಕಾಂಗ್ರೆಸ್ ಗೆ ಹೊಸ ಅಸ್ತ್ರ ಸಿಕ್ಕಿದಂತಾಗಿದ್ದು, ಬಿಜೆಪಿ ವಿರುದ್ಧ ಟೀಕಾ ಪ್ರಹಾರ ನಡೆಸಿದೆ.
ಬಿಜೆಪಿಯ ಕೃಪಾಕಟಾಕ್ಷದಿಂದ ಸೈಲೆಂಟ್ ಸುನಿಲ್ ಎಂಬ ರೌಡಿ ಮುಂದೆ ಈಗ ಪೂಲೀಸರೇ ಸೈಲೆಂಟ್ ಆಗಿದ್ದಾರೆ. ಸೈಲೆಂಟ್ ಸುನಿಲನಿಗೆ ಪೊಲೀಸರು ಹುಡುಕುತ್ತಿರಲಿಲ್ಲವೇ? ಬಿಜೆಪಿ ನಾಯಕರೊಂದಿಗೆ ವೇದಿಕೆಯಲ್ಲಿದ್ದಾಗ ಅಲ್ಲಿ ಪೊಲೀಸರೀರಲಿಲ್ಲವೇ? ಬಂಧಿಸದಂತೆ ಪೊಲೀಸರಿಗೆ ತಡೆದವರು ಯಾರು? ಪೊಲೀಸರಿಗಿಂತ ರೌಡಿಗಳೇ ಪ್ರಭಾವಿಗಳಾದರೆ? ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಪ್ರಶ್ನಿಸಿದೆ.
ಇದನ್ನೂ ಓದಿ: ಬಿಜೆಪಿ ಸಂಸದರ ಜೊತೆ ವೇದಿಕೆ ಮೇಲೆ ಕಾಣಿಸಿಕೊಂಡ ಸೈಲೆಂಟ್ ಸುನೀಲ!
ಕ್ರಿಮಿನಲ್‌ಗಳೊಂದಿಗೆ ಬಿಜೆಪಿಯ ನೆಂಟಸ್ತಿಕೆ ಇರುವಾಗ ರಾಜ್ಯದಲ್ಲಿ ಅಪರಾಧ ಪ್ರಕರಣ ಸಂಖ್ಯೆ ಏರದಿರುತ್ತದೆಯೇ? ರೌಡಿಗಳನ್ನು ಹಿಡಿಯುವ ಯೋಗ್ಯತೆ ನಿಮ್ಮ ಇಲಾಖೆಗೆ ಇಲ್ಲವೇ ಅಥವಾ ನೀವೇ ಪೊಲೀಸರನ್ನು ಕಟ್ಟಿಹಾಕಿದ್ದೀರಾ? ಎಂದು ಗೃಹ ಸಚಿವರನ್ನು ಪ್ರಶ್ನಿಸಿರುವ ಕಾಂಗ್ರೆಸ್, ಸಿಸಿಬಿ ಪೊಲೀಸರ ಕೈಗೆ ಸಿಗದ ರೌಡಿ ಸೈಲೆಂಟ್ ಸುನೀಲ , ಬಿಜೆಪಿ ನಾಯಕರ ಕೈಗೆ ಸಿಕ್ಕಿದ್ದು ಹೇಗೆ? ಎಂದು ಕೇಳಿದೆ.
ಕ್ರಿಮಿನಲ್‌ಗಳೊಂದಿಗೆ ಬಿಜೆಪಿಯ ನೆಂಟಸ್ತಿಕೆ ಇರುವಾಗ ರಾಜ್ಯದಲ್ಲಿ ಅಪರಾಧ ಪ್ರಕರಣ ಸಂಖ್ಯೆ ಏರದಿರುತ್ತದೆಯೇ?@JnanendraAraga ಅವರೇ, ರೌಡಿಗಳನ್ನು ಹಿಡಿಯುವ ಯೋಗ್ಯತೆ ನಿಮ್ಮ ಇಲಾಖೆಗೆ ಇಲ್ಲವೇ ಅಥವಾ ನೀವೇ ಪೊಲೀಸರನ್ನು ಕಟ್ಟಿಹಾಕಿದ್ದೀರಾ?
— Karnataka Congress (@INCKarnataka) November 28, 2022
ಸಿಸಿಬಿ ಪೊಲೀಸರ ಕೈಗೆ ಸಿಗದ ರೌಡಿ @BJP4Karnataka ನಾಯಕರ ಕೈಗೆ ಸಿಕ್ಕಿದ್ದು ಹೇಗೆ?
ವಾಂಟೆಡ್ ಲಿಸ್ಟ್‌ನಲ್ಲಿರುವ ರೌಡಿ ಪೊಲೀಸರ ಕೈಗೆ ಸಿಗುವುದಿಲ್ಲ, ಆದರೆ ಬಿಜೆಪಿ ನಾಯಕರ ಜೊತೆಯಲ್ಲಿರುತ್ತಾನೆ! ಕಳ್ಳರು, ಸುಳ್ಳರು, ಭ್ರಷ್ಟರು, ರೌಡಿಗಳು ಎಲ್ಲರಿಗೂ ಒಂದೇ ಸೂರು - ಬಿಜೆಪಿ. ಪೊಲೀಸರು ಹುಡುಕುತ್ತಿದ್ದ ರೌಡಿಯ ಜೊತೆಗೆ ನಿಮ್ಮ ನಾಯಕರಿಗೆ ಏನು ಕೆಲಸ? ಆತನ ಬಂಧನ ಆಗದಿರುವ ಹಿಂದೆ ಬಿಜೆಪಿ ಕೈವಾಡವಿದೆಯೇ? ಎಂದು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿದೆ.
ವಾಂಟೆಡ್ ಲಿಸ್ಟ್‌ನಲ್ಲಿರುವ ರೌಡಿ ಪೊಲೀಸರ ಕೈಗೆ ಸಿಗುವುದಿಲ್ಲ, ಆದರೆ ಬಿಜೆಪಿ ನಾಯಕರ ಜೊತೆಯಲ್ಲಿರುತ್ತಾನೆ!
— Karnataka Congress (@INCKarnataka) November 28, 2022
ಕಳ್ಳರು, ಸುಳ್ಳರು, ಭ್ರಷ್ಟರು, ರೌಡಿಗಳು ಎಲ್ಲರಿಗೂ ಒಂದೇ ಸೂರು - ಬಿಜೆಪಿ.
ಪೊಲೀಸರು ಹುಡುಕುತ್ತಿದ್ದ ರೌಡಿಯ ಜೊತೆಗೆ ನಿಮ್ಮ ನಾಯಕರಿಗೆ ಏನು ಕೆಲಸ @BJP4Karnataka?
ಆತನ ಬಂಧನ ಆಗದಿರುವ ಹಿಂದೆ ಬಿಜೆಪಿ ಕೈವಾಡವಿದೆಯೇ?