'ಕಾಂಗ್ರೆಸ್ ನಲ್ಲಿ ಎಷ್ಟು ಜನ ರೌಡಿಶೀಟರ್ ಇದ್ದಾರೆ ಲೆಕ್ಕ ಹಾಕಲಿ': ಸಿಎಂ ಬೊಮ್ಮಾಯಿ ತಿರುಗೇಟು
ಬಿಜೆಪಿ ನಾಯಕರು ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ರೌಡಿ ಶೀಟರ್ ಭಾಗಿಯಾಗಿದ್ದಕ್ಕೆ ಕಾಂಗ್ರೆಸ್ ನಾಯಕರು ತರಾಟೆಗೆ ತೆಗೆದುಕೊಂಡು ರಾಜ್ಯ ರಾಜಕೀಯ ವಲಯದಲ್ಲಿ ಬಿಸಿ ಚರ್ಚೆಯಾಗುತ್ತಿದೆ.
Published: 29th November 2022 11:58 AM | Last Updated: 29th November 2022 08:43 PM | A+A A-

ಸಿಎಂ ಬೊಮ್ಮಾಯಿ ಸಂಗ್ರಹ ಚಿತ್ರ
ನವದೆಹಲಿ: ಬಿಜೆಪಿ ನಾಯಕರು ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ರೌಡಿ ಶೀಟರ್ ಭಾಗಿಯಾಗಿದ್ದಕ್ಕೆ ಕಾಂಗ್ರೆಸ್ ನಾಯಕರು ತರಾಟೆಗೆ ತೆಗೆದುಕೊಂಡು ರಾಜ್ಯ ರಾಜಕೀಯ ವಲಯದಲ್ಲಿ ಬಿಸಿ ಚರ್ಚೆಯಾಗುತ್ತಿದೆ.
ಈ ಬಗ್ಗೆ ಇಂದು ದೆಹಲಿ ಪ್ರವಾಸ ಕೈಗೊಂಡಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರ ಬಳಿ ಪ್ರತಿಕ್ರಿಯೆ ಕೇಳಿದಾಗ, ನನಗೆ ವಿವರ ಗೊತ್ತಿಲ್ಲ, ಆದರೆ ಕಾಂಗ್ರೆಸ್ ನಲ್ಲಿ ಎಷ್ಟು ರೌಡಿಶೀಟರ್ ಇದ್ದಾರೆ ಎಂದು ಲೆಕ್ಕಹಾಕಲಿ ಎಂದು ತಿರುಗೇಟು ನೀಡಿದರು.
On @BJP4Karnataka leaders sharing dias with criminal silent Sunila @CMofKarnataka @BSBommai asked @INCKarnataka to count how many rowdies are in its fold.@XpressBengaluru @AshwiniMS_TNIE pic.twitter.com/lNfVcNb6uw
— Devaraj Hirehalli Bhyraiah (@swaraj76) November 29, 2022
ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಅವರನ್ನು ಭೇಟಿಯಾಗಲು ಸಮಯ ಕೇಳಿದ್ದು ನಾಳೆ ಅವರು ಸಮಯ ನೀಡುವ ಸಾಧ್ಯತೆಯಿದೆ. ಕೇಂದ್ರ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್, ಭೂಪೇಂದ್ರ ಯಾದವ್ ಮತ್ತು ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಲಿದ್ದು, ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಜೊತೆಗೆ ಮೇಕೆದಾಟು, ಭದ್ರಾ ಮೇಲ್ಡಂಡೆ ಯೋಜನೆ, ಮಹದಾಯಿ ಬಗ್ಗೆ ಚರ್ಚೆ ಮಾಡಲಿರುವುದಾಗಿ ತಿಳಿಸಿದರು.
ಇದನ್ನೂ ಓದಿ: ಕಾಂಗ್ರೆಸ್ ರೌಡಿಗಳನ್ನು ಖಂಡಿಸುತ್ತದೆಯಂತೆ! ನಿಮ್ಮ ಪಕ್ಷದ ನಾಯಕರ 'ಆ ದಿನಗಳು' ಮರೆತು ಹೋಗಿವೆಯೆ?
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಉದ್ಘಾಟನೆಗೆ ಆಹ್ವಾನಿಸಲಾಗುವುದು ಹಾಗೂ ಭೂಪೇಂದ್ರ ಯಾದವ್ ಅವರೊಂದಿಗೆ ಪರಿಸರ ಸಂಬಂಧಿ ಯೋಜನೆಗಳ ಬಗ್ಗೆ ಚರ್ಚೆ ಮಾಡಲಿರುವುದಾಗಿ ಮುಖ್ಯಮಂತ್ರಿ ತಿಳಿಸಿದರು.