ಮಲ್ಲೇಶ್ವರಂ ಸರ್ಕಾರಿ ಬಾಲಕಿಯರ ಪಿಯು ಕ್ಯಾಂಪಸ್ ನಲ್ಲಿ ಸ್ನಾತಕೋತ್ತರ ಪದವಿವರೆಗೆ ಶಿಕ್ಷಣ
ಬೆಂಗಳೂರು ನಗರ ವಿಶ್ವವಿದ್ಯಾಲಯದ ಮೊದಲ ಬಹುಶಿಸ್ತೀಯ ಮಹಿಳಾ ಕಾಲೇಜು ಅಸ್ತಿತ್ವಕ್ಕೆ ಬಂದ ಮೊದಲ ವರ್ಷದಲ್ಲೇ 300 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿದೆ.
Published: 29th November 2022 09:19 AM | Last Updated: 29th November 2022 09:19 AM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾಲಯದ ಮೊದಲ ಬಹುಶಿಸ್ತೀಯ ಮಹಿಳಾ ಕಾಲೇಜು ಅಸ್ತಿತ್ವಕ್ಕೆ ಬಂದ ಮೊದಲ ವರ್ಷದಲ್ಲೇ 300 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿದೆ. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಸೋಮವಾರ ಹೊಸ ಪ್ರಯೋಗಾಲಯಗಳನ್ನು ಉದ್ಘಾಟಿಸುವುದರೊಂದಿಗೆ ಕಾಲೇಜು ತನ್ನ ಮೊದಲ ವಾರ್ಷಿಕೋತ್ಸವವನ್ನು ಆಚರಿಸಿಕೊಂಡಿತು.
ಮಲ್ಲೇಶ್ವರಂನ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನ ಆವರಣದಲ್ಲಿರುವ ಈ ಸಂಸ್ಥೆಯು ಬೆಂಗಳೂರು ನಗರ ವಿಶ್ವವಿದ್ಯಾಲಯ ಮಹಿಳೆಯರಿಗಾಗಿ ಸ್ಥಾಪಿಸಿದ ಮೊದಲ ಕಾಲೇಜ್ ಆಗಿದೆ. ಈ ಕಾಲೇಜಿನಲ್ಲಿ ಆರಂಭದಲ್ಲಿ ಕಡಿಮೆ ಸಂಖ್ಯೆಯ ವಿದ್ಯಾರ್ಥಿನಿಯರಿದ್ದರು. ಇದೀಗ ಈ ಸಂಖ್ಯೆ 300 ಕ್ಕೂ ಹೆಚ್ಚಿದೆ. ಇಲ್ಲಿನ ಶಿಕ್ಷಣದ ಗುಣಮಟ್ಟ ಖಾಸಗಿ ಕಾಲೇಜುಗಳಿಗಿಂತ ಉತ್ತಮವಾಗಿದೆ ಎಂದು ಅವರು ಹೇಳಿದರು.
ಇದೇ ವೇಳೆ ಪಿಯು ಕಾಲೇಜು ಆವರಣದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗೆ ಸಚಿವರು ಶಂಕುಸ್ಥಾಪನೆ ನೆರವೇರಿಸಿದರು. 11.25 ಕೋಟಿ ವೆಚ್ಚದಲ್ಲಿ ಶಾಲೆ ಸ್ಥಾಪನೆಯಾಗಲಿದೆ. ಈ ಕ್ಯಾಂಪಸ್ ನಲ್ಲೇ ಅಂಗನವಾಡಿ ಮಟ್ಟದಿಂದ ಸ್ನಾತಕೋತ್ತರ ಹಂತದವರೆಗೆ ಶಿಕ್ಷಣವನ್ನು ಒದಗಿಸಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು. ಈ ಆವರಣದಲ್ಲಿ ನಿರ್ಮಿಸಲಾಗುವ ಹೊಸ ಪ್ರಾಥಮಿಕ ಶಾಲೆಯು ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮಗಳ ಶಿಕ್ಷಣವನ್ನು ಹೊಂದಿರುತ್ತದೆ ಎಂದು ನಾರಾಯಣ್ ಹೇಳಿದರು.