ಬಡ್ತಿ, ವರ್ಗಾವಣೆ ಕಡತಗಳ ಕಳುಹಿಸದಿರಿ: ಅರಣ್ಯ ಇಲಾಖೆಗೆ ಮುಖ್ಯಮಂತ್ರಿಗಳ ಕಚೇರಿ ಸೂಚನೆ
ಬಡ್ತಿ ಮತ್ತು ವರ್ಗಾವಣೆಗಾಗಿ ಯಾವುದೇ ಕಡತಗಳನ್ನು ಕಳುಹಿಸದಂತೆ ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿಗಳ ಕಚೇರಿ ಆದೇಶಿಸಿದೆ.
Published: 29th November 2022 08:52 AM | Last Updated: 29th November 2022 11:55 AM | A+A A-

ಸಂಗ್ರಹ ಚಿತ್ರ
ಬೆಂಗಳೂರು: ಬಡ್ತಿ ಮತ್ತು ವರ್ಗಾವಣೆಗಾಗಿ ಯಾವುದೇ ಕಡತಗಳನ್ನು ಕಳುಹಿಸದಂತೆ ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿಗಳ ಕಚೇರಿ ಆದೇಶಿಸಿದೆ.
ಕಡತಗಳ ಸಂಖ್ಯೆ ಕಡಿಮೆ ಮಾಡಲು ಈ ಆದೇಶ ಹೊರಡಿಸಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ: ವೈಜ್ಞಾನಿಕ ರೀತಿಯಲ್ಲಿ ಹಾವುಗಳ ರಕ್ಷಿಸಲು ಮಾರ್ಗಸೂಚಿ ಬಿಡುಗಡೆಗೊಳಿಸಿದ ಸರ್ಕಾರ!
ಹಲವರು ನಿವೃತ್ತಿ ಹಂತ ತಲುಪಿದ್ದು, ಈ ಹಿನ್ನೆಲೆಯಲ್ಲಿ ಅನೇಕರು ವರ್ಗಾವಣೆಯನ್ನು ಬಯಸುತ್ತಿದ್ದಾರೆ, ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ವರ್ಗಾವಣೆ ಮಾಡುವಂತೆ ಹಲವು ಮನವಿ ಮಾಡಿಕೊಳ್ಳುತ್ತಿದ್ದಾರೆ.
ಸಿಬ್ಬಂದಿಗಳು ಹೆಚ್ಚಿನ ಅವಧಿಗೆ ಹುದ್ದೆಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ಮುಖ್ಯಮಂತ್ರಿಗಳ ಕಚೇರಿಯಲ್ಲಿ ಸಂಗ್ರಹವಾಗಿರುವ ಕಡತಗಳನ್ನು ಕಡಿಮೆ ಮಾಡಲು ಈ ಆದೇಶಗಳನ್ನು ಹೊರಡಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.