ಮತದಾರರ ಗುರುತಿನ ಚೀಟಿ ಪರಿಷ್ಕರಣೆ ಅಕ್ರಮ: ಮತ್ತೋರ್ವನ ಬಂಧನ
ಮತದಾರರ ಗುರುತಿನ ಚೀಟಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲಸೂರು ಗೇಟ್ ಪೊಲೀಸರು ಮತ್ತೋರ್ವನನ್ನು ಬಂಧಿಸಿದ್ದಾರೆ. ಚಿಲುಮೆ ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಪ್ರತಿನಿಧಿ ಅನಿಲ್ ನನ್ನು ನಗರದ ಹೊರವಲಯದಲ್ಲಿ ಬಂಧಿಸಲಾಗಿದೆ.
Published: 29th November 2022 09:01 AM | Last Updated: 29th November 2022 05:27 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ಮತದಾರರ ಗುರುತಿನ ಚೀಟಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲಸೂರು ಗೇಟ್ ಪೊಲೀಸರು ಮತ್ತೋರ್ವನನ್ನು ಬಂಧಿಸಿದ್ದಾರೆ. ಚಿಲುಮೆ ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಪ್ರತಿನಿಧಿ ಅನಿಲ್ ನನ್ನು ನಗರದ ಹೊರವಲಯದಲ್ಲಿ ಬಂಧಿಸಲಾಗಿದೆ.
ಅನಿಲ್ ನನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಇದರೊಂದಿಗೆ ಈವರೆಗೂ ಬಿಬಿಎಂಪಿಯ ನಾಲ್ವರು ಅಧಿಕಾರಿಗಳು ಸೇರಿದಂತೆ 11 ಜನರನ್ನು ಬಂಧಿಸಲಾಗಿದೆ.
ಇದನ್ನೂ ಓದಿ: ವೋಟರ್ ಐಡಿ ಹಗರಣ: ನಕಲಿ ಐಡಿ ಪಡೆಯಲು ಎನ್‌ಜಿಒಗೆ ಸಹಾಯ ಮಾಡಿದ್ದ ನಾಲ್ವರು ಆರ್‌ಒಗಳ ಬಂಧನ
ಮೊದಲಿಗೆ ಚಿಲುಮೆ ಸಂಸ್ಥೆಯ ಧರ್ಮೇಶ್ ಮತ್ತು ರೇಣುಕಾ ಪ್ರಸಾದ್ ಅವರನ್ನು ಪೊಲೀಸರು ಬಂಧಿಸಿದ್ದರು. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಎಂಟು ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ನಂತರ ಚಿಲುಮೆ ಸಂಸ್ಥೆಯ ನಿರ್ದೇಶಕರಾದ ಕೆಂಪೇಗೌಡ, ರವಿಕುಮಾರ್ ಹಾಗೂ ಆಡಳಿತಾಧಿಕಾರಿ ಲೋಕೇಶ್ ಅವರನ್ನು ಬಂಧಿಸಲಾಗಿತ್ತು. ಮತದಾರರ ಗುರುತಿನ ಚೀಟಿ ಪರಿಷ್ಕರಣೆಯಲ್ಲಿ ಚಿಲುಮೆ ಸಂಸ್ಥೆಯ ಅಕ್ರಮ ಬಹಿರಂಗವಾಗಿತ್ತು.
ಮತದಾರರ ಗುರುತಿನ ಚೀಟಿ ಪರಿಷ್ಕರಣೆಯಲ್ಲಿ ಅಕ್ರಮಕ್ಕೆ ಸಂಬಂಧಿಸಿದಂತೆ ಇಬ್ಬರು ಐಎಎಸ್ ಅಧಿಕಾರಿಗಳಾದ ಎಸ್. ರಂಗಪ್ಪ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಕೆ ಶ್ರೀನಿವಾಸ್ ಅವರನ್ನು ಚುನಾವಣಾ ಆಯೋಗ ಸೇವೆಯಿಂದ ಅಮಾನತುಪಡಿಸಿದೆ.