ಮತದಾರರ ಮಾಹಿತಿ ಕಳವು ಪ್ರಕರಣಕ್ಕೆ ಮತ್ತೊಂದು ತಲೆದಂಡ: ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಎತ್ತಂಗಡಿ?

ಮತದಾರರ ಮಾಹಿತಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳಂಕಿತ ಎನ್‌ಜಿಒ ಚಿಲುಮೆಗೆ ಸಹಾಯ ಮಾಡಿದ ಆರೋಪದ ಮೇಲೆ ನಾಲ್ವರು ಬಿಬಿಎಂಪಿ ಈಗಾಗಲೇ ಅಧಿಕಾರಿಗಳು ಪೊಲೀಸರ ವಶದಲ್ಲಿದ್ದು, ಪ್ರಕರಣ ಸಂಬಂಧ ಇನ್ನೂ 100ಕ್ಕೂ ಹೆಚ್ಚು ಅಧಿಕಾರಿಗಳಿಗೆ ಪೊಲೀಸರು ನೋಟಿಸ್ ಜಾರಿ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌.
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌.

ಬೆಂಗಳೂರು: ಮತದಾರರ ಮಾಹಿತಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳಂಕಿತ ಎನ್‌ಜಿಒ ಚಿಲುಮೆಗೆ ಸಹಾಯ ಮಾಡಿದ ಆರೋಪದ ಮೇಲೆ ನಾಲ್ವರು ಬಿಬಿಎಂಪಿ ಈಗಾಗಲೇ ಅಧಿಕಾರಿಗಳು ಪೊಲೀಸರ ವಶದಲ್ಲಿದ್ದು, ಪ್ರಕರಣ ಸಂಬಂಧ ಇನ್ನೂ 100ಕ್ಕೂ ಹೆಚ್ಚು ಅಧಿಕಾರಿಗಳಿಗೆ ಪೊಲೀಸರು ನೋಟಿಸ್ ಜಾರಿ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಈ ನಡುವೆ ಪ್ರಕರಣ ಸಂಬಂಧ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಕೂಡ ವರ್ಗಾವಣೆಗೊಳಗಾಗಲಿದ್ದಾರೆಂಬ ಮಾತುಗಳು ಕೇಳಿ ಬರುತ್ತಿವೆ.

ತುಷಾರ್ ಗಿರಿನಾಥ್ ಅವರ ವರ್ಗಾವಣೆ ಬಳಿಕ ಸ್ಥಾನಕ್ಕೆ ಬಿಬಿಎಂಪಿಯ ಮಾಜಿ ಆಯುಕ್ತರಾದ ಗೌರವ್ ಗುಪ್ತಾ ಅಥವಾ ಎನ್ ಮಂಜುನಾಥ್ ಪ್ರಸಾದ್ ಅವರನ್ನು ಮತ್ತೆ ಮುಖ್ಯಸ್ಥರನ್ನಾಗಿ ನೇಮಕ ಮಾಡಲಿದೆ ಎಂದು ಹೇಲಲಾಗುತ್ತಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಗಿರಿನಾಥ್ ಅವರು, “ನನಗೆ ಈ (ವದಂತಿಗಳು) ಬಗ್ಗೆ ಏನೂ ತಿಳಿದಿಲ್ಲ. ನಾವು ನಮ್ಮ ಕೆಲಸವನ್ನು ಮಾತ್ರ ಮಾಡುತ್ತಿದ್ದೇವೆಂದು ಹೇಳಿದರು.

ಕಳೆದ ವಾರ, ಚುನಾವಣಾ ಆಯೋಗವು (EC) ಪ್ರಕರಣ ಸಂಬಂಧ ಇಬ್ಬರು ಬಿಬಿಎಂಪಿ ಹಿರಿಯ ಅಧಿಕಾರಿಗಳನ್ನು ಅಮಾನತುಗೊಳಿಸಿತ್ತು.

ನಿರ್ವಾಹಕ ಆಯುಕ್ತ ಮತ್ತು ಹೆಚ್ಚುವರಿ ಚುನಾವಣಾ ನೋಂದಣಿ ಅಧಿಕಾರಿ ರಂಗಪ್ಪ ಮತ್ತು ಬೆಂಗಳೂರು ಡಿಸಿ, ಆಡಳಿತ ಆಯುಕ್ತ ಮತ್ತು ಹೆಚ್ಚುವರಿ ಚುನಾವಣಾ ನೋಂದಣಿ ಅಧಿಕಾರಿ ಕೆ ಶ್ರೀನಿವಾಸ್ ಅವರನ್ನು ಅಮಾನತುಗೊಳಿಸಿತ್ತು.

 ಹಿರಿಯ ಅಧಿಕಾರಿಯೊಬ್ಬರ ಮಾತನಾಡಿ, ಭಾರತೀಯ ಚುನಾವಣಾ ಆಯೋಗ ತನ್ನ ಖ್ಯಾತಿಗೆ ಅಪಾಯದಲ್ಲಿದೆ ಎಂದು ಭಾವಿಸಿದ್ದು, ಪ್ರಕರಣ ಸಂಬಂಧ ಮತ್ತಷ್ಟು ಅಧಿಕಾರಿಗಳು ಶಿಕ್ಷೆ ಎದುರಿಸಲಿದ್ದಾರೆಂದು ಹೇಳಿದ್ದಾರೆ.

ಬೆಂಗಳೂರು ಮಾಜಿ ಉಸ್ತುವಾರಿ ಸಚಿವ ಆರ್ ರಾಮಲಿಂಗಾ ರೆಡ್ಡಿ ಅವರು ಮಾತನಾಡಿ, ಕೆಲವು ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡರೂ ಪ್ರಯೋಜನವಿಲ್ಲ. ಕೆಲ ಸಚಿವ ಖಾತೆಗಳು ಮತ್ತು ಬೆಂಗಳೂರು ಅಭಿವೃದ್ಧಿ ಖಾತೆಯನ್ನು ಉಳಿಸಿಕೊಂಡಿರುವ ಮುಖ್ಯಮಂತ್ರಿಗಳೇ ಇದಕ್ಕೆ ಹೊಣೆಯಾಗಬೇಕು ಎಂದು ಹೇಳಿದ್ದಾರೆ.

ಏತನ್ಮಧ್ಯೆ, ಚುನಾವಣಾ ಆಯೋಗದ ನಿರ್ದೇಶನಗಳನ್ನು ಅನುಸರಿಸಿ, ರಾಜ್ಯ ಸರ್ಕಾರವು ಮತದಾರರ ಪಟ್ಟಿಯನ್ನು ತಯಾರಿಸಲು ಚುನಾವಣಾ ನೋಂದಣಿ ಅಧಿಕಾರಿಗಳಿಗೆ ಸಹಾಯ ಮಾಡಲು ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಸಹಾಯಕ ಚುನಾವಣಾ ನೋಂದಣಿ ಅಧಿಕಾರಿಯನ್ನು ನೇಮಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com