ವಕ್ಫ್ ಬೋರ್ಡ್ ನಿಂದ 10 ಮುಸ್ಲಿಂ ಮಹಿಳಾ ಕಾಲೇಜು ಸ್ಥಾಪನೆ ಪ್ರಸ್ತಾವಕ್ಕೆ ಸರ್ಕಾರ ಅಸ್ತು; ಮುಂದಿನ ತಿಂಗಳು ಸಿಎಂ ಶಂಕುಸ್ಥಾಪನೆ ನಿರೀಕ್ಷೆ

ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜು ತರಗತಿಯೊಳಗೆ ಹಿಜಾಬ್ ಧರಿಸುವುದಕ್ಕೆ ನಿಷೇಧ ಹೇರಿರುವ ಸಂಬಂಧ ವಿವಾದ ಇರುವ ಮಧ್ಯೆ ಮುಸ್ಲಿಂ ಮಹಿಳೆಯರಿಗೆ 10 ಪ್ರತ್ಯೇಕ ಕಾಲೇಜು ಆರಂಭವಾಗುತ್ತಿದೆ ಎಂದು ಹೇಳಲಾಗುತ್ತಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜು ತರಗತಿಯೊಳಗೆ ಹಿಜಾಬ್ ಧರಿಸುವುದಕ್ಕೆ ನಿಷೇಧ ಹೇರಿರುವ ಸಂಬಂಧ ವಿವಾದ ಇರುವ ಮಧ್ಯೆ ಮುಸ್ಲಿಂ ಮಹಿಳೆಯರಿಗೆ 10 ಪ್ರತ್ಯೇಕ ಕಾಲೇಜು ಆರಂಭವಾಗುತ್ತಿದೆ ಎಂದು ಹೇಳಲಾಗುತ್ತಿದೆ. 

ರಾಜ್ಯ ವಕ್ಫ್ ಬೋರ್ಡ್ ಈ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ರಾಜ್ಯ ಸರ್ಕಾರ ಅಸ್ತು ಎಂದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮುಂದಿನ ತಿಂಗಳು ಕಾಲೇಜುಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡುವ ನಿರೀಕ್ಷೆಯಿದೆ. ಈ ಕಾಲೇಜುಗಳಲ್ಲಿ ತರಗತಿಯೊಳಗೆ ಹಿಜಾಬ್ ಧರಿಸಲು ಅವಕಾಶ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.

ಮುಸ್ಲಿಂ ಮಹಿಳೆಯರಿಗೆ ಈ 10 ಕಾಲೇಜುಗಳು ಮಂಗಳೂರು, ಶಿವಮೊಗ್ಗ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ತಲೆಯೆತ್ತಲಿವೆ. ಈ ಕಾಲೇಜುಗಳ ಸ್ಥಾಪನೆಗೆ ವಕ್ಫ್ ಬೋರ್ಡ್ ನಿಂದ ನಿಧಿ ಸಂಗ್ರಹಿಸಲಾಗುತ್ತದೆ. ರಾಜ್ಯ ಸರ್ಕಾರದ ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದಕ್ಕೆ ನಿಷೇಧವಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com