
ಸಿದ್ದರಾಮಯ್ಯ
ಶಿವಮೊಗ್ಗ: ಚುನಾವಣಾ ಆಯುಕ್ತರ ನೇಮಕಕ್ಕೆ ಕೊಲಿಜಿಯಂ ಮಾದರಿಯ ವ್ಯವಸ್ಥೆ ಅಗತ್ಯವಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಂಗಳವಾರ ಹೇಳಿದ್ದಾರೆ.
ಚುನಾವಣಾ ಆಯೋಗದ ಆಯುಕ್ತರ ನೇಮಕಾತಿಯಲ್ಲಿ ಪಾರದರ್ಶಕತೆ ಇಲ್ಲ, ಕೇಂದ್ರ ಸರ್ಕಾರದ ಹಸ್ತಕ್ಷೇಪದ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಅಸಮಾಧಾನ ವ್ಯಕ್ತಪಡಿಸಿರುವ ಕುರಿತು ಸಿದ್ದರಾಮಯ್ಯ ಅವರು ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದರು.
ಭಾರತೀಯ ಚುನಾವಣಾ ಆಯೋಗವು ಸ್ವತಂತ್ರ ಸಾಂವಿಧಾನಿಕ ಸಂಸ್ಥೆಯಾಗಿದ್ದು, ಇದು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ನಡೆಸಬೇಕು. ಹೀಗಾಗಿ ಚುನಾವಣಾ ಆಯುಕ್ತರ ನೇಮಕಕ್ಕೆ ಕೊಲಿಜಿಯಂ ಮಾದರಿಯ ವ್ಯವಸ್ಥೆ ಅಗತ್ಯವಿದೆ. ಆಡಳಿತ ಮತ್ತು ವಿರೋಧ ಪಕ್ಷಗಳ ಪ್ರತಿನಿಧಿಗಳನ್ನು ಸದಸ್ಯರನ್ನಾಗಿ ಹೊಂದಿರುವ ಕೊಲಿಜಿಯಂ ಅನ್ನು ರಚಿಸಬೇಕೆಂದು ನಾನು ಸೂಚಿಸುತ್ತೇನೆ. ಇದರಿಂದ ದೇಶಕ್ಕೆ ಅನುಕೂಲವಾಗಲಿದೆ ಎಂದು ಹೇಳಿದರು.
ಇದನ್ನೂ ಓದಿ: ತೆರೆಮೇಲೆ ಸಿದ್ದರಾಮಯ್ಯ ಬಯೋಪಿಕ್: ಮಾಜಿ ಸಿಎಂ ಪಾತ್ರದಲ್ಲಿ ವಿಜಯ್ ಸೇತುಪತಿ? ಅಹಿಂದ ನಾಯಕನ ವರ್ಣರಂಜಿತ ಬದುಕು!
ಇದೇ ವೇಳೆ ತಮ್ಮ ಜೀವನ ಚರಿತ್ರೆ ಆಧಾರಿತ ಚಿತ್ರವೊಂದು ನಿರ್ಮಾಣವಾಗುತ್ತಿದೆ ಎಂಬ ವಿಚಾರ ಕುರಿತು ಪ್ರತಿಕ್ರಿಯಿಸಿ, ಯಾರೋ ಸಿನಿಮಾ ಮಾಡಲು ಬಂದಿದ್ರು. ಕನಕಗಿರಿ ಕ್ಷೇತ್ರದವರಂತೆ, ನಿಮ್ಮ ಸಿನಿಮಾ ಮಾಡ್ತೀನಿ ಅಂತ ಹೇಳಿದ್ರು, ನಾನೇನು ನಟನೆ ಮಾಡುತ್ತಿಲ್ಲಪ್ಪ, ನನಗೆ ಆಕ್ಟಿಂಗ್ ಬರಲ್ಲ ಎಂದು ತಿಳಿಸಿದರು.