ಸಮುದಾಯ ಆರೋಗ್ಯ ಕೇಂದ್ರಗಳಿಗೆ ಆರು ಕಮಾಂಡರ್ ಸೆಂಟರ್ ಗಳ ಜೋಡಣೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

24x7 ಗಳಿಗೆ ಆರೋಗ್ಯ ಕೇಂದ್ರಗಳಿಗೆ ಸಲಹೆ ಸೂಚನೆಗಳನ್ನು ನೀಡುವ ಆರು ಕಮಾಂಡರ್ ಸೆಂಟರ್ ಗಳನ್ನು ರಾಜ್ಯದ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಜೋಡಿಸುವ ವ್ಯವಸ್ಥೆಯನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಟೆಲಿಮೆಡಿಸಿನ್ ಮೂಲಕ ಪ್ರಾದೇಶಿಕ ಹಂತದಲ್ಲಿ, ವೈದ್ಯರ ತಂಡವೊಂದು 24x7 ಗಳಿಗೆ ಆರೋಗ್ಯ ಕೇಂದ್ರಗಳಿಗೆ ಸಲಹೆ ಸೂಚನೆಗಳನ್ನು ನೀಡುವ ಆರು ಕಮಾಂಡರ್ ಸೆಂಟರ್ ಗಳನ್ನು ರಾಜ್ಯದ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಜೋಡಿಸುವ ವ್ಯವಸ್ಥೆಯನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಆಯೋಜಿಸಿರುವ “ 50 ಹಾಸಿಗೆ ಸಾಮರ್ಥ್ಯದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಉಪಕೇಂದ್ರ”ದ ಹಾಗೂ “ ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯ ಮಕ್ಕಳ ತೀವ್ರ ನಿಗಾ ಘಟಕದ ಉಪಕೇಂದ್ರ ಉದ್ಘಾಟನೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

100 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೇರಿಸುವುದು  ತಲಾ 7-8 ಲಕ್ಷ ರೂ.ಗಳ ವೆಚ್ಚದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದೊರೆಯುವ ಸೌಲಭ್ಯಗಳನ್ನು, ಬೆಡ್ ಗಳನ್ನು ಹೆಚ್ಚಿಸಲಾಗುವುದು. ಮೇಲ್ದರ್ಜೆಗೇರಿಸಿದ ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ಮೊದಲೇ ಇದ್ದ ಸಮುದಾಯ ಆರೋಗ್ಯ ಕೇಂದ್ರಗಳನ್ನು ಟೆಲಿಮೆಡಿಸಿನ್ ಗೆ ಜೋಡಣೆ ಮಾಡುವ  ವ್ಯವಸ್ಥೆ ರೂಪಿಸಲಾಗುತ್ತಿದೆ ಎಂದರು.

ಆಯುಷ್ಮಾನ್ ಕಾರ್ಡ್ ಬಳಸಲು ಸರಳೀಕೃತ ನಿಯಮಗಳಿಗೆ ಶೀಘ್ರದಲ್ಲಿ ಆದೇಶ:

ಇದಲ್ಲದೇ ಸುಮಾರು 81 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ನಿರ್ಮಿಸಲಾಗುತ್ತಿದೆ. ಹಿರಿಯ ನಾಗರಿಕರಿಗೆ ಆರೋಗ್ಯ ತಪಾಸಣೆ ಶಿಬಿರಗಳನ್ನು ಗ್ರಾಮೀಣ ಹಾಗೂ ತಾಲ್ಲೂಕು ಮಟ್ಟದಲ್ಲಿ  ಹಾಗೂ ಬೆಂಗಳೂರಿನಲ್ಲಿ ವಲಯಮಟ್ಟದಲ್ಲಿ ಆರೋಗ್ಯ ಶಿಬಿರಗಳನ್ನು ನಡೆಸಲು ತೀರ್ಮಾನಿಸಲಾಗಿದೆ. ಹಿರಿಯ ನಾಗರಿಕರಿಗೆ ಕಣ್ಣಿನ ತಪಾಸಣೆ, ಅವಶ್ಯಕತೆಯಿದ್ದಲ್ಲಿ ಶಸ್ತ್ರಚಿಕಿತ್ಸೆ, ಬಡವರಿಗೆ ಉಚಿತ ಕನ್ನಡಕ ನೀಡುವ ಕಾರ್ಯಕ್ರಮ ಶೀಘ್ರದಲ್ಲಿ ಪ್ರಾರಂಭಿಸಲಾಗುವುದು. ಕಿವುಡರಿಗೆ ಕಾಕ್ಲಿಯರ್ ಇಂಪ್ಲಾಂಟ್ ವ್ಯವಸ್ಥೆಯನ್ನು ಬಡವರಿಗೆ ಉಚಿತವಾಗಿ ಪೂರೈಸಲಾಗುತ್ತಿದ್ದು, ಇದಕ್ಕಾಗಿ 500 ಕೋಟಿ ರೂ. ಮೀಸಲಿರಿಸಲಾಗಿದೆ. ಡಯಾಲಿಸಿಸ್ ಸೈಕಲ್ ಗಳನ್ನು 30 ಸಾವಿರಗಳಿಂದ 60 ಸಾವಿರಗಳನ್ನು ಹೆಚ್ಚಿಸಲಾಗಿದೆ. ಕಿಮೋಥೆರಪಿ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಆಯುಷ್ಮಾನ್ ಕಾರ್ಡ್ ಬಳಸಲು ಸರಳ ನಿಯಮಾವಳಿಗಳನ್ನು ಅತಿ ಶೀಘ್ರದಲ್ಲಿ ಹೊರಡಿಸಲಾಗುವುದು ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com