ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಭೂಮಿ ಕಂಪಿಸಿದ ಅನುಭವ; ಭಾರೀ ಶಬ್ದಕ್ಕೆ ಬೆಚ್ಚಿಬಿದ್ದ ಜನ

ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದಲ್ಲಿ ಭೂಮಿ ಕಂಪಿಸಿದ್ದು ಜನ ಆತಂಕಕ್ಕೆ ಒಳಗಾಗಿದ್ದಾರೆ. ಶಿರಾಳಕೊಪ್ಪ ಪಟ್ಟಣದ 3 ಕಿ.ಮೀ. ವ್ಯಾಪ್ತಿಯಲ್ಲಿ ಬೆಳಗಿನ ಜಾವ 3.55 ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದಲ್ಲಿ ಭೂಮಿ ಕಂಪಿಸಿದ್ದು ಜನ ಆತಂಕಕ್ಕೆ ಒಳಗಾಗಿದ್ದಾರೆ. ಶಿರಾಳಕೊಪ್ಪ ಪಟ್ಟಣದ 3 ಕಿ.ಮೀ. ವ್ಯಾಪ್ತಿಯಲ್ಲಿ ಬೆಳಗಿನ ಜಾವ 3.55 ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ.

ಮೊದಲ ಸಲ ಜೋರಾಗಿ ಭೂಮಿ ಕಂಪಿಸಿದ ಅನುಭವ ಆಗಿದೆ, ಎರಡನೇ ಸಲ ಕಂಪಿಸಿದ ಪ್ರಮಾಣ ಕಡಿಮೆ ಎನ್ನಿಸಿದೆ. ಯಾವುದೇ, ಹಾನಿಯಾದ ಬಗ್ಗೆ ಇನ್ನೂ ವರದಿಯಾಗಿಲ್ಲ. 4.1 ರ ಪ್ರಮಾಣದಲ್ಲಿ ಭೂಮಿ ಹಂಪಿಸಿದೆ, ಶಿರಾಳಕೊಪ್ಪ ಪಟ್ಟಣದ 3 ಕಿ.ಮೀ ಸುತ್ತಳತೆಯಲ್ಲಿ ಭೂಕಂಪನ ಕೇಂದ್ರಿತವಾಗಿದೆ ಎಂದೂ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹರಿದಾಡುತ್ತಿದೆ. ಈ ಬಗ್ಗೆ ಭೂಗರ್ಭ ಶಾಸ್ತ್ರಜ್ಞರು ಸ್ಪಷ್ಟನೆ ನೀಡಬೇಕಾಗಿದೆ. ಭೂಕಂಪದ ಜೊತೆ ಜನರಿಗೆ ಭಾರಿ ಶಬ್ಧ ಕೇಳಿಸಿದೆ. ಇದರಿಂದ ಜನರಲ್ಲಿ ಆತಂಕ ಉಂಟಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com