ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ಮೀಸಲಾತಿ: ಸರ್ವಪಕ್ಷ ಸಭೆಯಲ್ಲಿ ಜಸ್ಟೀಸ್ ನಾಗಮೋಹನ್ ದಾಸ್ ಸಮಿತಿ ವರದಿ ಚರ್ಚೆ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ (SC-ST) ಸೇರಿದ ಜಾತಿಗಳಿಗೆ ಮೀಸಲಾತಿ ನಿಗದಿಪಡಿಸುವ ಕುರಿತು ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಸಮಿತಿ ಸಲ್ಲಿಸಿದ್ದ ವರದಿಯ ವಿಸ್ತೃತ ಚರ್ಚೆ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಶುಕ್ರವಾರ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಸರ್ವಪಕ್ಷ ಸಭೆ ನಡೆಯಿತು.
Published: 07th October 2022 01:44 PM | Last Updated: 07th October 2022 02:01 PM | A+A A-

ಸರ್ವಪಕ್ಷ ಸಭೆಯಲ್ಲಿ ಸಿಎಂ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿಗಳು
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ (SC-ST) ಸೇರಿದ ಜಾತಿಗಳಿಗೆ ಮೀಸಲಾತಿ ನಿಗದಿಪಡಿಸುವ ಕುರಿತು ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಸಮಿತಿ ಸಲ್ಲಿಸಿದ್ದ ವರದಿಯ ವಿಸ್ತೃತ ಚರ್ಚೆ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಶುಕ್ರವಾರ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಸರ್ವಪಕ್ಷ ಸಭೆ ನಡೆಯಿತು.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ, ಚಿವರಾದ ಗೋವಿಂದ ಕಾರಜೋಳ, ಆರ್. ಅಶೋಕ, ಜೆ.ಸಿ. ಮಾಧುಸ್ವಾಮಿ, ಬಿ.ಶ್ರೀರಾಮುಲು, ಕೋಟ ಶ್ರೀನಿವಾಸ ಪೂಜಾರಿ, ಎಸ್. ಆಂಗಾರ, ಆನಂದಸಿಂಗ್, ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಯು.ಟಿ. ಖಾದರ್, ವಿಧಾನಸಭೆ ಪ್ರತಿಪಕ್ಷದ ಮುಖ್ಯಸಚೇತಕ ವಿಧಾನ ಪರಿಷತ್ ಪ್ರತಿಪಕ್ಷದ ಮುಖ್ಯಸಚೇತಕ ಪ್ರಕಾಶ್ ರಾಠೋಡ್, ಮಾಜಿ ಸಚಿವ ಸತೀಶ್ ಜಾರಕಿಹೊಳಿ, ಮಾಜಿ ಸಂಸದ ವಿ.ಎಸ್. ಉಗ್ರಪ್ಪ, ವಿಧಾನಪರಿಷತ್ ಸದಸ್ಯ ಭೋಜೆಗೌಡ, ರಾಜ್ಯ ಸರ್ಕಾರದ ಅಡ್ವಕೇಟ್ ಜನರಲ್ ಪ್ರಭುಲಿಂಗ ನಾವಡಗಿ ಹಾಗೂ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಹೆಚ್ಚಿಸಲು ರಚಿಸಿರುವ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ನೀಡಿರುವ ವರದಿ ಕುರಿತು ಚರ್ಚಿಸಲು ಮುಖ್ಯಮಂತ್ರಿ @BSBommai ಅವರ ಅಧ್ಯಕ್ಷತೆಯಲ್ಲಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ವಿಧಾನ ಮಂಡಲದ ಉಭಯ ಸದನಗಳ ನಾಯಕರ ಸಭೆ ಜರುಗಿತು.
1/2 pic.twitter.com/cUfSWjqqSU— CM of Karnataka (@CMofKarnataka) October 7, 2022
ನಾಗಮೋಹನ್ ದಾಸ್ ಸಮಿತಿಯು ಎಸ್ಸಿ ಮೀಸಲಾತಿಯನ್ನು ಶೇಕಡಾ 15 ರಿಂದ ಶೇಕಡಾ 17ಕ್ಕೆ, ಎಸ್ಟಿ ಮೀಸಲಾತಿಯನ್ನು ಶೇಕಡಾ 3ರಿಂದ ಶೇಕಡಾ 7ಕ್ಕೆ ಹೆಚ್ಚಿಸಲು ಶಿಫಾರಸು ಮಾಡಿದೆ. ಎಸ್‌ಟಿಗೆ ನಿಗದಿಪಡಿಸಿರುವ ಮೀಸಲಾತಿ ಪ್ರಮಾಣವನ್ನು ಶೇಕಡಾ 7.5ರಷ್ಟು ನಿಗದಿಪಡಿಸಬೇಕು ಎಂದು ವಾಲ್ಮೀಕಿ ಸಮುದಾಯ ಬೇಡಿಕೆ ಇಟ್ಟು, ಸತ್ಯಾಗ್ರಹ ನಡೆಸುತ್ತಿದೆ.
ಮೀಸಲಾತಿಯನ್ನು ಶೇಕಡಾ 50ಕ್ಕಿಂತ ಹೆಚ್ಚಿಗೆ ನಿಗದಪಡಿಸಬಾರದು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಆದರೆ ನಾಗಮೋಹನ್ ದಾಸ್ ಸಮಿತಿ ಶಿಫಾರಸು ಜಾರಿ ಮಾಡಿದರೆ ಮೀಸಲಾತಿ ಪ್ರಮಾಣವು ಒಟ್ಟಾರೆ ಶೇಕಡಾ 56ಕ್ಕೆ ಹೆಚ್ಚಳವಾಗುತ್ತದೆ. ಈ ಸಮಸ್ಯೆ ನಿರ್ವಹಿಸುವುದು ಹೇಗೆ ಎನ್ನುವ ಬಗ್ಗೆ ಮುಖ್ಯಮಂತ್ರಿ ಎಲ್ಲರ ಅಭಿಪ್ರಾಯ ಪರಾಮರ್ಶೆ ಮಾಡಲಿದ್ದಾರೆ.
ವಿಧಾನಸಭೆ ಅಧಿವೇಶನದಲ್ಲಿ ಮೀಸಲಾತಿಗೆ ಸಂಬಂಧಿಸಿದಂತೆ ಚರ್ಚೆ ನಡೆದಾಗ ಮುಖ್ಯಮಂತ್ರಿ ಸರ್ವಪಕ್ಷ ಸಭೆ ನಡೆಸುವ ಭರವಸೆ ನೀಡಿದ್ದರು. ಅದರಂತೆ ಇಂದು ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ನಿವಾಸದಲ್ಲಿ ಸಭೆ ನಡೆಯುತ್ತಿದೆ. ಮುಖ್ಯಮಂತ್ರಿ ಕರೆದಿರುವ ಸಭೆಗೆ ತೆರಳುವ ಮೊದಲು ಸಿದ್ದರಾಮಯ್ಯ ನಿವಾಸದಲ್ಲಿ ಕಾಂಗ್ರೆಸ್ ಪಕ್ಷದಲ್ಲಿರುವ ಎಸ್ಟಿ ನಾಯಕರೊಂದಿಗೆ ಸಿದ್ದರಾಮಯ್ಯ ಕೆಲ ಸಮಯ ಮಾತುಕತೆ ನಡೆಸಿದರು. ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಖಾದರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಉಪಸ್ಥಿತರಿದ್ದರು. ವಾಲ್ಮೀಕಿ ಜನಾಂಗದ ಬೇಡಿಕೆಯ ಕುರಿತು ವಿಷಯ ಪ್ರಸ್ತಾಪವಾಯಿತು ಎಂದು ಮೂಲಗಳು ತಿಳಿಸಿವೆ.
ನಗರದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯುತ್ತಿದ್ದು ಅಲ್ಲಿಯೂ ಮೀಸಲಾತಿ ವಿಚಾರ ಪ್ರಸ್ತಾಪವಾಗಿದೆ. ಎಸ್ಟಿ ಮೀಸಲಾತಿ ಹೆಚ್ಚಿಸಬೇಕು ಎಂದು ಸಭೆಯು ಶಿಫಾರಸು ಮಾಡಿದೆ. ಈ ಬಗ್ಗೆ ಇದೇ ತಿಂಗಳ 9ರ ಒಳಗೆ ಅಧಿಕೃತ ಘೋಷಣೆ ಪ್ರಕಟಿಸುವಂತೆ ಮುಖ್ಯಮಂತ್ರಿಗೆ ಮನವಿ ಮಾಡಿದೆ.
ಮೀಸಲಾತಿಗೆ ಸರ್ಕಾರ ಬದ್ಧ: ಬೊಮ್ಮಾಯಿ
ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿ ಕಾರ್ಯಕಾರಿಣಿ ನಡೆಯುತ್ತಿದೆ. ಅದರಲ್ಲಿ ಭಾಗವಹಿಸುವ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿಎಂ ಬೊಮ್ಮಾಯಿ, ಎಸ್ಸಿ, ಎಸ್ಟಿ ಮೀಸಲಾತಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಸಾಮಾಜಿಕವಾಗಿಯೂ ಹಲವು ಸಮಸ್ಯೆ ಬಗೆಹರಿಸಲು ನಾವು ಬದ್ಧರಾಗಿದ್ದೇವೆ. ಜನಪರವಾಗಿರುವ ಆಡಳಿತವನ್ನ ನಮ್ಮ ಸರ್ಕಾರ ನೀಡುತ್ತಿದೆ. ಚುನಾವಣೆಯ ದೃಷ್ಟಿಯಿಂದ ಇದು ಮಹತ್ವದ ಅಂಶ ಎಂದು ಹೇಳಿದರು.
ಹಲವು ಸಂಘಟನೆಗಳಿಂದ ಪ್ರತಿಭಟನೆ: ಸರ್ವಪಕ್ಷ ಸಭೆ ಆರಂಭಕ್ಕೂ ಮುನ್ನ ಸಿಎಂ ಅಧಿಕೃತ ನಿವಾಸದ ಹೊರಗೆ ದಲಿತ ಸಂಘರ್ಷ ಸಮಿತಿ ಸೇರಿದಂತೆ ಹಲವು ಸಂಘಟನೆಗಳ ಸದಸ್ಯರು ಎಸ್ಸಿ/ಎಸ್ಟಿ ಮೀಸಲಾತಿ ವಿಚಾರದಲ್ಲಿ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯ ವರದಿಯನ್ನು ತಕ್ಷಣವೇ ಜಾರಿಗೆ ತರುವಂತೆ ಒತ್ತಾಯಿಸಿದರು.
Commotion prevailed outside @CMofKarnataka 's office when members from various organisations including Dalit Sangarsh Samithi demanded state govt to implement Justice Nagmohan das committee's report on SC/ST reservation with immediate effect. CM has called all party meeting today pic.twitter.com/8Q45eJAGfx
— Ashwini M Sripad/ಅಶ್ವಿನಿ ಎಂ ಶ್ರೀಪಾದ್(@AshwiniMS_TNIE) October 7, 2022
ಸಭೆಯಲ್ಲಿ ಭಾಗವಹಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಸಿಗಬೇಕೆಂಬ ನಿಲುವಿಗೆ ನಾನು ಈಗಲೂ ಬದ್ಧ ಎಂದಿದ್ದಾರೆ.
ಎಸ್ಸಿ, ಎಸ್‌ಟಿ ಸಮುದಾಯಕ್ಕೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಸಿಗಬೇಕೆಂಬ ನಿಲುವಿಗೆ ನಾನು ಈಗಲೂ ಬದ್ಧ. ಮುಖ್ಯಮಂತ್ರಿ @BSBommai ಅವರ ಅಧ್ಯಕ್ಷತೆಯಲ್ಲಿ ನಡೆದ ಇಂದಿನ ವಿಧಾನಮಂಡಲದ ಉಭಯ ಸದನಗಳ ನಾಯಕರ ಸಭೆಯಲ್ಲೂ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದೇನೆ. pic.twitter.com/YHaADSzPjp
— Siddaramaiah (@siddaramaiah) October 7, 2022