ಎಸ್ಕಾರ್ಟ್ ಇಲ್ಲದೆ ಮನೆಗೆ ಹೋಗು ಎಂದು ಸಿದ್ದರಾಮಯ್ಯಗೆ ಸವಾಲು ಹಾಕಿದ್ದ ಪೊಲೀಸ್ ಪೇದೆ ಅಮಾನತು

ಪೊಲೀಸರನ್ನು ನಿಂದಿಸುವ ನೀನು ಎಸ್ಕಾರ್ಟ್ ಇಲ್ಲದೆ ಮನೆಗೆ ಹೋಗು ನೋಡೋಣ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಫೇಸ್‌ಬುಕ್‌ನಲ್ಲಿ ಸವಾಲು ಹಾಕಿದ್ದ ವಿಜಯಪುರದ ಪೊಲೀಸ್‌ ಪೇದೆ...
ರಾಜಶೇಖರ ಖಾನಾಪುರ
ರಾಜಶೇಖರ ಖಾನಾಪುರ

ವಿಜಯಪುರ: ಪೊಲೀಸರನ್ನು ನಿಂದಿಸುವ ನೀನು ಎಸ್ಕಾರ್ಟ್ ಇಲ್ಲದೆ ಮನೆಗೆ ಹೋಗು ನೋಡೋಣ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಫೇಸ್‌ಬುಕ್‌ನಲ್ಲಿ ಸವಾಲು ಹಾಕಿದ್ದ ವಿಜಯಪುರದ ಪೊಲೀಸ್‌ ಪೇದೆ ರಾಜಶೇಖರ ಖಾನಾಪುರ ಅವರನ್ನು ಶನಿವಾರ ಅಮಾನತುಗೊಳಿಸಲಾಗಿದೆ.

ವಿಜಯಪುರ ಪೊಲೀಸ್ ವರಿಷ್ಠಾಧಿಕಾರಿ ಎಚ್ ಡಿ ಆನಂದಕುಮಾರ್ ಅವರು ಪೇದೆ ರಾಜಶೇಖರ ಖಾನಾಪುರ ಅವರನ್ನು ಅಮಾನತು ಮಾಡಿ ಇಂದು ಆದೇಶ ಹೊರಡಿಸಿದ್ದಾರೆ.

ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಪೋಸ್ಟ್ ಹಾಕಿದ್ದ ರಾಜಶೇಖರ ಖಾನಾಪುರ ಅವರು ವಿಜಯಪುರ ಗ್ರಾಮಾಂತರ ಠಾಣೆಯಲ್ಲಿ ಪೊಲೀಸ್ ಕಾನ್ಸ್​ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಪೊಲೀಸರಿಗೆ ಬೈಯ್ಯುವ ನೀನು ಪೊಲೀಸ್ ಎಸ್ಕಾರ್ಟ್ ಇಲ್ಲದೆ ಮನೆಗೆ ಹೋಗು ನೋಡೋಣ ಎಂದು ಫೇಸ್​ಬುಕ್​ನಲ್ಲಿ ವಿಡಿಯೋ ಮೂಲಕ ಸವಾಲು ಹಾಕಿದ್ದರು. ಇದು ಸಾಮಾಜಿಕ ಜಾಲಾತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ಅಲ್ಲದೇ ಸಿದ್ದರಾಮಯ್ಯನವರ ಅಭಿಮಾನಿಗಳು ಪೇದೆಯನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿದ್ದರು. ಈ ಬಗ್ಗೆ ಪೊಲೀಸರಿಗೆ ದೂರು ಸಹ ನೀಡಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com