ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 22 ಸೇರಿ ರಾಜ್ಯದಲ್ಲಿ 69 ಮಂದಿಗೆ ಪಾಸಿಟಿವ್; ಶೂನ್ಯ ಸಾವು!

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 69 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,65,691ಕ್ಕೆ ಏರಿಕೆಯಾಗಿದೆ.
ಕೋವಿಡ್-19 ಸಾಂದರ್ಭಿಕ ಚಿತ್ರ
ಕೋವಿಡ್-19 ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 69 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,65,691ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಯಾರೂ ಮೃತಪಟ್ಟಿಲ್ಲ. ಇನ್ನು ರಾಜ್ಯದಲ್ಲಿ ಕೊರೋನಾದಿಂದ ಒಟ್ಟಾರೆ 40,245 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 22 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,72,403ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಯಾರೂ ಮೃತಪಟ್ಟಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 28 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 40,22,742ಕ್ಕೆ ಏರಿಕೆಯಾಗಿದೆ. ಇನ್ನು 2,662 ಸಕ್ರಿಯ ಪ್ರಕರಣಗಳಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com