ಸಹಪಾಠಿ ಮೇಲೆ ಹರಿದ ಬಿಎಂಟಿಸಿ ಬಸ್, ಜ್ಞಾನಭಾರತಿ ವಿವಿಯಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಬಸ್ ಹತ್ತುವಾಗ ಆಯತಪ್ಪಿ ಕೆಳಗೆ ಬಿದ್ದ ವಿದ್ಯಾರ್ಥಿನಿಯ ಮೇಲೆ ಬಿಎಂಟಿಸಿ ಬಸ್ ಹರಿದ ಪರಿಣಾಮ ಯುವತಿ ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರಿನ ಜ್ಞಾನಭಾರತಿ ವಿಶ್ವವಿದ್ಯಾಲಯ ಕ್ಯಾಂಪಸ್​ನಲ್ಲಿ ನಡೆದಿದ್ದು, ಇದೇ ವಿಚಾರವಾಗಿ ಜ್ಞಾನಭಾರತಿ ವಿವಿ ಆವರಣದಲ್ಲಿ ವಿದ್ಯಾರ್ಥಿಗಳು ತೀವ್ರ ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನಾ ನಿರತ ವಿದ್ಯಾರ್ಥಿಗಳು
ಪ್ರತಿಭಟನಾ ನಿರತ ವಿದ್ಯಾರ್ಥಿಗಳು

ಬೆಂಗಳೂರು: ಬಸ್ ಹತ್ತುವಾಗ ಆಯತಪ್ಪಿ ಕೆಳಗೆ ಬಿದ್ದ ವಿದ್ಯಾರ್ಥಿನಿಯ ಮೇಲೆ ಬಿಎಂಟಿಸಿ ಬಸ್ ಹರಿದ ಪರಿಣಾಮ ಯುವತಿ ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರಿನ ಜ್ಞಾನಭಾರತಿ ವಿಶ್ವವಿದ್ಯಾಲಯ ಕ್ಯಾಂಪಸ್​ನಲ್ಲಿ ನಡೆದಿದ್ದು, ಇದೇ ವಿಚಾರವಾಗಿ ಜ್ಞಾನಭಾರತಿ ವಿವಿ ಆವರಣದಲ್ಲಿ ವಿದ್ಯಾರ್ಥಿಗಳು ತೀವ್ರ ಪ್ರತಿಭಟನೆ ನಡೆಸಿದ್ದಾರೆ.

ಬಸ್ ಹತ್ತುವಾಗ ಕೆಳಗೆ ಬಿದ್ದ ಯುವತಿಯನ್ನು ಗಮನಿಸದೇ ಚಾಲಕ ಬಸ್ ಮುಂದಕ್ಕೆ ಚಲಾಯಿಸಿ ಅಜಾಗರೂಕತೆ ತೋರಿದ್ದಾನೆ. ಈ ಹಿನ್ನೆಲೆ ಯುವತಿ ಸೊಂಟದ ಮೇಲೆ ಬಸ್ ಹರಿದಿದ್ದು, ವಿದ್ಯಾರ್ಥಿನಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಕೋಲಾರ ಮೂಲದ ಶಿಲ್ಪ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಗೊಂಡ ಶಿಲ್ಪಾಳನ್ನು ಸ್ಥಳೀಯ ಪೊಲೀಸರು ಹತ್ತಿರದ ಅಸ್ಪತ್ರೆಗೆ ರವಾನಿಸಿದ್ದಾರೆ. ಇವರು ಮೊದಲ ವರ್ಷದ ಪಿಜಿ ವ್ಯಾಸಂಗ ಮಾಡುತ್ತಿದ್ದಾರೆ. ಘಟನೆ ಖಂಡಿಸಿ ನೂರಾರು ವಿದ್ಯಾರ್ಥಿಗಳು ‌ಪ್ರತಿಭಟನೆ ನಡೆಸುತ್ತಿದ್ದಾರೆ.

ಚಿಕಿತ್ಸಾ ವೆಚ್ಚ ಭರಿಸುತ್ತೇವೆ: ಡಿಸಿ ಸ್ಪಷ್ಟನೆ
ಇತ್ತ ಅಪಘಾತ ಪ್ರಕರಣ ಸಂಬಂಧಿಸಿದಂತೆ ಯೂನಿವರ್ಸಿಟಿ ಒಳಗೆ ವಾಹನ ಬಿಡದಂತೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಯೂನಿವರ್ಸಿಟಿಯ ಎಲ್ಲಾ ಗೇಟ್ ಗಳನ್ನು ಬೀಗ ಹಾಕಿ ಧರಣಿ ನಡೆಸಲಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಕೆಎಸ್ ಆರ್ ಪಿ ವಾಹನ ಆಗಮಿಸಿದೆ. ಸ್ಥಳಕ್ಕಾಗಮಿಸಿದ ಬಿಎಂಟಿಸಿ ಪಶ್ಚಿಮ ವಲಯದ ಡಿಸಿ ಶ್ರೀನಾಥ್, ಯುವತಿಯ ಚಿಕಿತ್ಸಾ ವೆಚ್ಚ ಭರಿಸೋದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ ಯುವತಿಯನ್ನ ಈಗಾಗ್ಲೇ ಪೋರ್ಟಿಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಮೂರ್ನಾಲ್ಕು ಸರ್ಜರಿ ಮಾಡಬೇಕು ಅಂತ ಹೇಳಿದ್ದಾರೆ. ಎಲ್ಲಾ ಚಿಕಿತ್ಸಾ ವೆಚ್ಚ ಭರಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಸಾರ್ವಜನಿಕ ವಾಹನ ನಿಷಿದ್ಧ ಸಂಬಂಧ ಸಮಿತಿ ರಚನೆ
ಬಿಬಿಎಂಪಿ (BBMP), ಅರಣ್ಯ, ಪೊಲೀಸ್ ಇಲಾಖೆ, ವಿದ್ಯಾರ್ಥಿಗಳ (Students) ಸೇರಿ ಸಮಿತಿ ರಚನೆ ಮಾಡಲಾಗುವುದು. ಉನ್ನತ ಶಿಕ್ಷಣ ಸಚಿವರ ನೇತೃತ್ವದಲ್ಲಿ ಸಭೆ ಮಾಡಲಾಗುವುದು. ತಕ್ಷಣಕ್ಕೆ ಸಭೆ ಕರೆದು ಸಾರ್ವಜನಿಕ ವಾಹನ ನಿಷಿದ್ಧದ ಬಗ್ಗೆ ತೀರ್ಮಾನ ಮಾಡಲಾಗುವುದು. ಬಿಎಂಟಿಸಿ ವತಿಯಿಂದ ವಿದ್ಯಾರ್ಥಿನಿ ಚಿಕಿತ್ಸಾ ವೆಚ್ಚ ನೀಡಲಾಗುವುದು. ವಿಶ್ವವಿದ್ಯಾಲಯ ವಿದ್ಯಾರ್ಥಿನಿ ಹೆಸರಲ್ಲಿ 5 ಲಕ್ಷ ಎಫ್`ಡಿ ಇಡಲು ನಿರ್ಧಾರ ಮಾಡಲಾಗಿದೆ ಎಂದು ಬಿಬಿಎಂಪಿ ಜಂಟಿ ಆಯುಕ್ತರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com