ಜನಾರ್ದನ ರೆಡ್ಡಿ ಬಳ್ಳಾರಿಗೆ ಭೇಟಿ ನೀಡಲು ಸುಪ್ರೀಂ ಕೋರ್ಟ್ ಅನುಮತಿ

ಬಹುಕೋಟಿ ಅಕ್ರಮ ಗಣಿಗಾರಿಕೆ ಪ್ರಕರಣಗಳಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ತಮ್ಮ ಮಗಳನ್ನು ಭೇಟಿಯಾಗಲು ಬಳ್ಳಾರಿ ಜಿಲ್ಲೆಗೆ ನವೆಂಬರ್ 6, 2022 ರ ವರೆಗೆ ಭೇಟಿ ನೀಡಲು ಹಾಗೂ ವಾಸ್ತವ್ಯ ಹೂಡಲು...
ಜನಾರ್ದನ ರೆಡ್ಡಿ
ಜನಾರ್ದನ ರೆಡ್ಡಿ

ನವದೆಹಲಿ: ಬಹುಕೋಟಿ ಅಕ್ರಮ ಗಣಿಗಾರಿಕೆ ಪ್ರಕರಣಗಳಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ತಮ್ಮ ಮಗಳನ್ನು ಭೇಟಿಯಾಗಲು ಬಳ್ಳಾರಿ ಜಿಲ್ಲೆಗೆ ನವೆಂಬರ್ 6, 2022 ರ ವರೆಗೆ ಭೇಟಿ ನೀಡಲು ಹಾಗೂ ವಾಸ್ತವ್ಯ ಹೂಡಲು ಸುಪ್ರೀಂ ಕೋರ್ಟ್ ಸೋಮವಾರ ಅನುಮತಿ ನೀಡಿದೆ.

ತಮ್ಮ ಮಗಳ ಹೆರಿಗೆ ಹಿನ್ನೆಲೆಯಲ್ಲಿ ಬಳ್ಳಾರಿಗೆ ತೆರಳಲು ಅನುಮತಿ ನೀಡುವಂತೆ ಕೋರಿ ರೆಡ್ಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂಆರ್ ಶಾ ಮತ್ತು ಕೃಷ್ಣ ಮುರಾರಿ ಅವರ ಪೀಠ, ನವೆಂಬರ್ 6ರ ವರೆಗೆ ಬಳ್ಳಾರಿಗೆ ಭೇಟಿ ನೀಡಲು ಹಾಗೂ ಅಲ್ಲಿ ವಾಸ್ತವ್ಯಕ್ಕೆ ಅನುಮತಿ ನೀಡಿ ಆದೇಶ ಹೊರಡಿಸಿದೆ.

ಇದೇ ವೇಳೆ ವಿಚಾರಣಾ ನ್ಯಾಯಾಲಯಕ್ಕೆ ದೈನಂದಿನ ಆಧಾರದ ಮೇಲೆ ವಿಚಾರಣೆ ನಡೆಸುವಂತೆ ಮತ್ತು ನವೆಂಬರ್ 9, 2022 ರಿಂದ ಆರು ತಿಂಗಳೊಳಗೆ ವಿಚಾರಣೆಯನ್ನು ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ಕರ್ನಾಟಕದ ಬಳ್ಳಾರಿಯ ಮತ್ತು ಆಂಧ್ರಪ್ರದೇಶದ ಅನಂತಪುರಂ ಹಾಗೂ ಕಡಪಾ ಜಿಲ್ಲೆಯಲ್ಲಿ ಸಾಕ್ಷಿಗಳನ್ನು ಮೊದಲು ವಿಚಾರಣೆಗೆ ಒಳಪಡಿಸುವಂತೆ ನ್ಯಾಯಾಲಯ ಪ್ರಾಸಿಕ್ಯೂಷನ್‌ಗೆ ಸೂಚಿಸಿದೆ. 

ವಿಚಾರಣೆ ಪೂರ್ಣಗೊಳ್ಳುವವರೆಗೆ ಬಳ್ಳಾರಿಯಿಂದ ಹೊರಗುಳಿಯುವಂತೆ ರೆಡ್ಡಿಗೆ ಸೂಚಿಸಿದ ಪೀಠ, ವಿಚಾರಣೆಯನ್ನು ವಿಳಂಬಗೊಳಿಸಲು ಪ್ರಯತ್ನಿಸಿದೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ರೆಡ್ಡಿಗೆ ಸುಪ್ರೀಂ ಕೋರ್ಟ್ ಎಚ್ಚರಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com