ಸಹಕಾರಿ ಬ್ಯಾಂಕ್ ನಿಂದ ಗ್ರಾಹಕರಿಗೆ ವಂಚನೆ: ಬೆಂಗಳೂರಿನ 14 ಕಡೆಗಳಲ್ಲಿ ಸಿಸಿಬಿ ದಾಳಿ

ನಗರದ 14 ಕಡೆಗಳಲ್ಲಿ ಇಂದು ಬುಧವಾರ ಬೆಳ್ಳಂಬೆಳಗ್ಗೆ ಸಿಸಿಬಿ ದಾಳಿಯಾಗಿದೆ. ಶುಶೃತಿ ಸೌಹಾರ್ದ ಸಹಕಾರ ಬ್ಯಾಂಕ್ (ShuShruti Bank) ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಂದ ಈ ದಾಳಿ ನಡೆದಿದೆ.
ಶುಶೃತಿ ಸೌಹಾರ್ದ ಸಹಕಾರಿ ಬ್ಯಾಂಕ್
ಶುಶೃತಿ ಸೌಹಾರ್ದ ಸಹಕಾರಿ ಬ್ಯಾಂಕ್

ಬೆಂಗಳೂರು: ನಗರದ 14 ಕಡೆಗಳಲ್ಲಿ ಇಂದು ಬುಧವಾರ ಬೆಳ್ಳಂಬೆಳಗ್ಗೆ ಸಿಸಿಬಿ ದಾಳಿಯಾಗಿದೆ. ಶುಶೃತಿ ಸೌಹಾರ್ದ ಸಹಕಾರ ಬ್ಯಾಂಕ್ (ShuShruti Bank) ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಂದ ಈ ದಾಳಿ ನಡೆದಿದೆ.

ಐವರು ಎಸಿಪಿ (ACP), 14 ಇನ್ಸ್ಪೆಕ್ಟರ್ ಸೇರಿ 60ಕ್ಕೂ ಹೆಚ್ಚು ಪೊಲೀಸರ ತಂಡದಿಂದ ಬೆಂಗಳೂರಿನ ವಿಲ್ಸನ್ ಗಾರ್ಡನ್, ಪೀಣ್ಯ, ರಾಜಗೋಪಾಲನಗರ, ಚಿಕ್ಕಜಾಲ ಸೇರಿದಂತೆ ನಗರದ ಹಲವೆಡೆ ದಾಳಿ ನಡೆದಿದೆ. 

ಹೂಡಿಕೆದಾರರಿಗೆ ಹಣ ವಾಪಸ್ ನೀಡದೆ ವಂಚಿಸಿದ ಆರೋಪದ ಹಿನ್ನೆಲೆಯಲ್ಲಿ ನಗರದ ಹಲವೆಡೆ ಬ್ಯಾಂಕ್ ವಿರುದ್ಧ ಎಫ್‌ಐಆರ್ (FIR) ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಶುಶೃತಿ ಬ್ಯಾಂಕ್ ಅಧ್ಯಕ್ಷ ಶ್ರೀನಿವಾಸ ಮೂರ್ತಿಯನ್ನು ಈ ಹಿಂದೆ ಬಂಧಿಸಲಾಗಿತ್ತು. ನಂತರ ಈ ಎಲ್ಲಾ ಕೇಸ್‌ಗಳನ್ನು ಸಿಸಿಬಿಗೆ (CCB) ವರ್ಗಾವಣೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಏಕಕಾಲಕ್ಕೆ ಬ್ಯಾಂಕ್‌ನ ಹಲವು ಶಾಖೆಗಳ ಮೇಲೆ ದಾಳಿ ನಡೆಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com