ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 121 ಸೇರಿ ರಾಜ್ಯದಲ್ಲಿ 163 ಮಂದಿಗೆ ಪಾಸಿಟಿವ್; ಶೂನ್ಯ ಸಾವು!

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 163 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,66,705ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 163 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,66,705ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಯಾರೂ ಮೃತಪಟ್ಟಿಲ್ಲ. ಇಲ್ಲಿಯವರೆಗೂ ರಾಜ್ಯದಲ್ಲಿ ಒಟ್ಟಾರೆ 40,250 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 121 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,73,078ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಯಾರೂ ಮೃತಪಟ್ಟಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 179 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 40,23,479ಕ್ಕೆ ಏರಿಕೆಯಾಗಿದೆ. ಇನ್ನು 2,934 ಸಕ್ರಿಯ ಪ್ರಕರಣಗಳಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com