ಭಾರತ್ ಜೋಡೋ ಯಾತ್ರೆ: ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ; ಬಳ್ಳಾರಿಯಲ್ಲಿ ರಾಹುಲ್ ಗಾಂಧಿ ಹೇಳಿಕೆ!

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರತಿಪಾದಿಸಿದ್ದಾರೆ.
ಭಾರತ್ ಜೋಡೋ ಯಾತ್ರೆ
ಭಾರತ್ ಜೋಡೋ ಯಾತ್ರೆ

ಬೆಂಗಳೂರು: ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರತಿಪಾದಿಸಿದ್ದಾರೆ.

ಇತ್ತೀಚೆಗೆ ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ಇತ್ತೀಚೆಗೆ  ಅವರು ಪ್ರಾದೇಶಿಕ ಭಾಷೆ ಸಾರ್ವಭೌಮತೆ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಸಂವಾದದಲ್ಲಿ ಭಾಗವಹಿಸಿದ್ದ ಯುವತಿಯೊಬ್ಬರು ತಾನು ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ್ದೇನೆ.  ಕೇಂದ್ರ ಸರ್ಕಾರದ ಹುದ್ದೆಗಳನ್ನು ನೀಡಲು ಆಯೋಜಿಸುವ  ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹಿಂದಿ, ಇಂಗ್ಲಿಷ್ ಮಾತ್ರವೇ ಇರುತ್ತದೆ. ಇದರಿಂದ ಕನ್ನಡದಲ್ಲಿ ಪರೀಕ್ಷೆ ಬರೆಯಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.

ಈ ಮಾತಿಗೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ ಅಭ್ಯರ್ಥಿ ಕೇಳುವ ಭಾಷೆಯಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು. ಇದು ಕರ್ತವ್ಯ. ನೀವು ಕನ್ನಡದಲ್ಲಿಯೇ ಸಂವಹನ ಮಾಡಲು ಬಯಸುವುದು ನಿಮ್ಮ ಹಕ್ಕು. ಭಾಷೆಯಲ್ಲಿ ಕಲ್ಪನೆಯಿದೆ. ಭರವಸೆಯಿದೆ. ಭಾಷೆಗೆ ಇತಿಹಾಸವಿದೆ. ಪ್ರತಿ ರಾಜ್ಯಕ್ಕೂ ತನ್ನ ಭಾಷೆ ಬಳಸುವ ಸ್ವಾತಂತ್ರ್ಯವಿರಬೇಕು ಎಂದು ಪ್ರತಿಪಾದಿಸಿದರು.

ಹಿಂದಿಯೇ ರಾಷ್ಟ್ರೀಯ ಸಾರ್ವಭೌಮ ಭಾಷೆ ಎನ್ನುವಂತೆ ಪ್ರತಿಪಾದಿಸುವವರ ನಡುವೆ ರಾಹುಲ್ ಗಾಂದಿ ಅವರ ನಿಲುವು ವಿಭಿನ್ನವಾಗಿರುವುದು, ಆಯಾ ರಾಜ್ಯಗಳ ಭಾಷೆಗೆ ಪ್ರಾಮುಖ್ಯತೆ ನೀಡಬೇಕು ಎನ್ನುವ ಅವರ ನಿಲುವು ಪ್ರಶಂಸೆಗೆ ಪಾತ್ರವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com