ಕೈ-ಕಾಲು ತೊಳೆಯುವಾಗ ಕಾಲು ಜಾರಿ ಇಬ್ಬರ ಸಾವು, ಕಲ್ಲೂರು ಕೆರೆಯಲ್ಲಿ ದುರಂತ!
ಹರಿಯುತ್ತಿದ್ದ ನೀರಿನಲ್ಲಿ ಕೈಕಾಲು ತೊಳೆಯಲು ಹೋದ ಇಬ್ಬರು ವ್ಯಕ್ತಿಗಳು ನೀರಿನಲ್ಲಿ ರಭಸಕ್ಕೆ ಸಿಲುಕಿ ಕೊಚ್ಚಿ ಹೋಗಿರುವ ಘಟನೆ ಗುಬ್ಬಿ ತಾಲ್ಲೂಕಿನಲ್ಲಿ ನಡೆದಿದೆ.
Published: 16th October 2022 01:16 PM | Last Updated: 16th October 2022 01:16 PM | A+A A-

ಸಾಂದರ್ಭಿಕ ಚಿತ್ರ
ಗುಬ್ಬಿ: ಹರಿಯುತ್ತಿದ್ದ ನೀರಿನಲ್ಲಿ ಕೈಕಾಲು ತೊಳೆಯಲು ಹೋದ ಇಬ್ಬರು ವ್ಯಕ್ತಿಗಳು ನೀರಿನಲ್ಲಿ ರಭಸಕ್ಕೆ ಸಿಲುಕಿ ಕೊಚ್ಚಿ ಹೋಗಿರುವ ಘಟನೆ ಗುಬ್ಬಿ ತಾಲ್ಲೂಕಿನಲ್ಲಿ ನಡೆದಿದೆ.
ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಕಲ್ಲೂರು ಕೆರೆಯಲ್ಲಿ ನಡೆದಿದೆ. ನೀರಿನಲ್ಲಿ ಕೊಚ್ಚಿ ಹೋಗಿರುವವರನ್ನು ಕಲ್ಲೂರು ಗ್ರಾಮದ ನಟರಾಜ್ (28 ವರ್ಷ) ಹಾಗೂ ಹನುಮಂತಪ್ಪ(45 ವರ್ಷ) ಎಂದು ಗುರುತಿಸಲಾಗಿದೆ. ಸತತವಾಗಿ ಸುರಿಯುತ್ತಿರುವ ರಣಚಂಡಿ ಮಳೆಗೆ ಕೆರೆ ಕಟ್ಟೆಗಳು ತುಂಬಿ ಹರಿಯುತ್ತಿವೆ. ಅದರಂತೆ ಕಲ್ಲೂರು ಕೆರೆಯು ಕೋಡಿ ಬಿದ್ದು ನೀರು ರಭಸವಾಗಿ ಹರಿಯುತ್ತಿದ್ದು, ಈ ನೀರಿನಲ್ಲಿ ಕೈ ಕಾಲು ತೊಳೆಯಲು ಹೋದ ನಟರಾಜ್ ಮತ್ತು ಹನುಮಂತಪ್ಪ ಅವರು ಕಾಲು ಜಾರಿ ಆಕಸ್ಮಿಕವಾಗಿ ನೀರಿಗೆ ಬಿದ್ದಿದ್ದಾರೆ.
ಇದನ್ನೂ ಓದಿ: ಹಾಸನ ಜಿಲ್ಲೆಯ ಅರಸೀಕೆರೆ ಬಳಿ ಭೀಕರ ಅಪಘಾತದಲ್ಲಿ 9 ಮಂದಿ ಸಾವು: ಮುಖ್ಯಮಂತ್ರಿ ಕಂಬನಿ, ಪರಿಹಾರ ಭರವಸೆ
ನೀರು ರಭಸವಾಗಿ ಹರಿಯುತ್ತಿದ್ದರಿಂದ ಕೊಚ್ಚಿ ಹೋಗಿದ್ದಾರೆ. ಈ ಇಬ್ಬರ ಬಗ್ಗೆ ಒಬ್ಬರ ಶವ ಪತ್ತೆಯಾಗಿದ್ದು, ಇನ್ನೊಬ್ಬರ ಶವದ ಹುಡುಕಾಟಕ್ಕಾಗಿ ತೀವ್ರ ಶೋಧನಾ ಕಾರ್ಯ ನಡೆದಿದೆ. ಘಟನಾ ಸ್ಥಳಕ್ಕೆ ಸಿ.ಎಸ್. ಪುರ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿದ್ದು, ಶವಕ್ಕಾಗಿ ತೀವ್ರ ಹುಡುಕಾಟ ನಡೆಸಿದ್ದಾರೆ. ಈ ಸಂಬಂಧ ಸಿ.ಎಸ್. ಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.