ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಕಾರು ಅಡ್ಡಗಟ್ಟಿ ಬೆದರಿಕೆ: ಆರೋಪಿಯಿಂದ ಸ್ಪ್ಯಾನರ್ ವಶಪಡಿಸಿಕೊಂಡ ಪೊಲೀಸರು

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರನ್ನು ಅಡ್ಡಗಟ್ಟಿ ಬೆದರಿಕೆಯೊಡ್ಡಿದ್ದ ಪ್ರಕರಣದ ಆರೋಪಿ ಮನೆಯಿಂದ ಸ್ಪ್ಯಾನರ್ ಮತ್ತು ಮೊಬೈಲ್ ಹ್ಯಾಂಡ್‌ಸೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರು ತಿಳಿಸಿದ್ದಾರೆ.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರನ್ನು ಅಡ್ಡಗಟ್ಟಿ ಬೆದರಿಕೆಯೊಡ್ಡಿದ್ದ ಪ್ರಕರಣದ ಆರೋಪಿ ಮನೆಯಿಂದ ಸ್ಪ್ಯಾನರ್ ಮತ್ತು ಮೊಬೈಲ್ ಹ್ಯಾಂಡ್‌ಸೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ರಿಯಾಜ್ (38) ಎಂಬಾತನನ್ನು ಪೊಲೀಸರು ಶನಿವಾರ ಬಂಧಿಸಿ, ಆತನ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ದೂರದವರೆಗೆ ಶಾಸಕರ ಕಾರನ್ನು ಹಿಂಬಾಲಿಸಿ ಗುರುವಾರ ರಾತ್ರಿ 11.15ರ ಸುಮಾರು ಫರಂಗಿಪೇಟೆಯ ಬಳಿ ಶಾಸಕರ ಕಾರಿಗೆ ಅಡ್ಡಹಾಕಿ ನಿಂದಿಸಿದ್ದಾನೆ. ನಂತರ ಆರೋಪಿಯು ತನ್ನ ಕಾರಿನಿಂದ ಆಯುಧಗಳನ್ನು ತೆಗೆದು ಶಾಸಕರಿಗೆ ಬೆದರಿಕೆ ಹಾಕಿದ್ದಾನೆ ಎಂದು ಶಾಸಕರ ಕಾರು ಚಾಲಕ ನವೀನ್ ವಿಠಲ ಪೂಜಾರಿ ದೂರಿದ್ದಾರೆ.

ಆರೋಪಿ ಸ್ಪ್ಯಾನರ್ ಬಳಸಿ ಶಾಸಕರ ಚಾಲಕನಿಗೆ ಬೆದರಿಕೆ ಹಾಕಿದ್ದಾನೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ್ ಭಗವಾನ್ ಸೋನಾವಣೆ ತಿಳಿಸಿದ್ದಾರೆ.

ಈಮಧ್ಯೆ, ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್, ಈ ಘಟನೆಯನ್ನು ಲಘುವಾಗಿ ತೆಗೆದುಕೊಳ್ಳಬಾರದು. ನಿಷೇಧಿತ ಪಿಎಫ್‌ಐ ಚಟುವಟಿಕೆಗಳಲ್ಲಿ ದಕ್ಷಿಣ ಕನ್ನಡದಲ್ಲಿ ಕೇರಳದ ಜನರು ಭಾಗಿಯಾಗಿದ್ದಾರೆ ಎಂಬ ವರದಿಗಳಿವೆ ಎಂದರು.

ಘಟನೆ ಬಗ್ಗೆ ಆಳವಾದ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ. ಕರಾವಳಿ ಪ್ರದೇಶದಲ್ಲಿ ಶಾಂತಿ ಕದಡಲು ಸಂಘಟಿತ ಜಾಲ ಪ್ರಯತ್ನಿಸುತ್ತಿದೆ ಎಂದು ಕರ್ನಾಟಕ ಮೀನುಗಾರಿಕೆ ಮತ್ತು ಬಂದರು ಸಚಿವ ಎಸ್ ಅಂಗಾರ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com