ಜಲಜೀವನ್ ಮಿಷನ್: ನವೆಂಬರ್ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಲು ಸಿಇಒಗಳಿಗೆ ಸಿಎಂ ಬೊಮ್ಮಾಯಿ ಸೂಚನೆ

ಜಲ ಜೀವನ್ ಮಿಷನ್ ಯೋಜನೆಯಡಿ ಎರಡು ಹಂತಗಳಲ್ಲಿ ಕಾಮಗಾರಿಗಳು ಪ್ರಾರಂಭವಾಗಿದ್ದು, ಬ್ಯಾಚ್ 1ರಡಿ ಶೇ. 88 ರಷ್ಟು ಕಾಮಗಾರಿಗಳು ಪೂರ್ಣಗೊಂಡಿದೆ. ಉಳಿದ ಕಾಮಗಾರಿಗಳನ್ನು ನವೆಂಬರ್ ಅಂತ್ಯದೊಳಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಜಲ ಜೀವನ್ ಮಿಷನ್ ಯೋಜನೆಯಡಿ ಎರಡು ಹಂತಗಳಲ್ಲಿ ಕಾಮಗಾರಿಗಳು ಪ್ರಾರಂಭವಾಗಿದ್ದು, ಬ್ಯಾಚ್ 1ರಡಿ ಶೇ. 88 ರಷ್ಟು ಕಾಮಗಾರಿಗಳು ಪೂರ್ಣಗೊಂಡಿದೆ. ಉಳಿದ ಕಾಮಗಾರಿಗಳನ್ನು ನವೆಂಬರ್ ಅಂತ್ಯದೊಳಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಿಇಒಗಳ ಸಭೆಯಲ್ಲಿ ಮಾತನಾಡಿದ ಅವರು, ಓವರ್ ಹೆಡ್ ಟ್ಯಾಂಕ್ ಗಳ ನಿರ್ಮಾಣಕ್ಕೆ ಕಂದಾಯ ಇಲಾಖೆ ನೆರವಿನೊಂದಿಗೆ ಜಾಗ ಪಡೆದುಕೊಂಡು ಕಾಮಗಾರಿ ಪೂರ್ಣಗೊಳಿಸಬೇಕು. ಬ್ಯಾಚ್-3 ರ ಟಂಡರ್ ಪ್ರಕ್ರಿಯೆ ಶೀಘ್ರವೇ ಪ್ರಾರಂಭಿಸಬೇಕು ಹಾಗೂ ಬ್ಯಾಚ್-4ರ ಡಿ.ಪಿ. ಆರ್ ತಯಾರಿಕೆ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದರು.

ಜಲಜೀವನ್ ಮಿಷನ್ ಪ್ರಧಾನ ಮಂತ್ರಿಯವರ ಮಹತ್ವಕಾಂಕ್ಷೆಯ ಯೋಜನೆಯಾಗಿದ್ದು, ನಿಗದಿತ ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು. ಈ ಯೋಜನೆಯ ಪ್ರಗತಿಯನ್ನು ನಿಯಮಿತವಾಗಿ ಪ್ರತಿ ತಿಂಗಳು ಪರಿಶೀಲಿಸುವಂತೆ ಸೂಚಿಸಿದರು. ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ 13 ಕೋಟಿ ಮಾನವ ದಿನಗಳ ಗುರಿಯಲ್ಲಿ ಈಗಾಗಲೇ ಶೇ. 88 ರಷ್ಟು ಗುರಿ ಸಾಧನೆಯಾಗಿದೆ. ಶಾಲಾ ಕಟ್ಟಡ, ಚರಂಡಿ ವ್ಯವಸ್ಥೆ ಮತ್ತಿತರ ಕಾಮಗಾರಿಗಳನ್ನು ನರೇಗಾದಡಿ ಕೈಗೆತ್ತಿಕೊಳ್ಳುವಂತೆ  ಹೇಳಿದರು. 

ರಾಜ್ಯದ 5,946 ಪಂಚಾಯಿತಿಗಳ ಪೈಕಿ 5,200 ಪಂಚಾಯಿತಿಗಳಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕಗಳು ಕಾರ್ಯಾರಂಭ ಮಾಡಿದೆ. ಉಳಿದ ಪಂಚಾಯಿತಿಗಳಲ್ಲೂ ಶೀಘ್ರವೇ ಪ್ರಾರಂಭಿಸಬೇಕು, ಅಮೃತ ಗ್ರಾಮ ಪಂಚಾಯಿತಿ ಹಂತ-2 ಅಡಿ ಈ ಆರ್ಥಿಕ ವರ್ಷದೊಳಗೆ ಎಲ್ಲಾ ಕಾಮಗಾರಿಗಳು ಪ್ರಾರಂಭವಾಗಬೇಕು, ಮುಖ್ಯಮಂತ್ರಿಗಳ ವಿಶೇಷ ಮಂಜೂರಾತಿ ಕಾರ್ಯಕ್ರಮದಡಿ ಮಂಜೂರಾದ ಕಾಮಗಾರಿಗಳನ್ನು ಈ ಆರ್ಥಿಕ ವರ್ಷದೊಳಗೆ ಪೂರ್ಣಗೊಳಿಸಬೇಕು ಎಂದರು.

ಜಾನುವಾರುಗಳಲ್ಲಿ ಕಾಣಿಸಿಕೊಂಡಿರುವ ಚರ್ಮಗಂಟು ರೋಗ ನಿವಾರಣೆಯನ್ನು ಪರಿಣಾಮಕಾರಿಯಾಗಿ ಮಾಡಬೇಕು. ಜಿಲ್ಲಾ ಪಂಚಾಯಿತಿಯಲ್ಲಿ 30 ಕೋಟಿ ರೂ.ಗಳಷ್ಟು ಅನುದಾನ ಲಭ್ಯವಿದ್ದು, ಅದರಲ್ಲಿ ಲಸಿಕೆ, ಔಷಧಿ ಹಾಗೂ ಪೌಷ್ಠಿಕ ಆಹಾರದ ವೆಚ್ಚ ಭರಿಸಲು ಸಿಎಂ ಸೂಚಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com