ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 199 ಸೇರಿ ರಾಜ್ಯದಲ್ಲಿ ಇಂದು 220 ಮಂದಿಗೆ ಪಾಸಿಟಿವ್; ಸಾವು ಶೂನ್ಯ

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 220 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,67,149ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 220 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,67,149ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40,252 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 199 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,73,417ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲೂ ಕೊರೋನಾದಿಂದ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 203 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 40,23,833ಕ್ಕೆ ಏರಿಕೆಯಾಗಿದೆ. ಇನ್ನು 3,022 ಸಕ್ರಿಯ ಪ್ರಕರಣಗಳಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com