ನ.11ಕ್ಕೆ ಪ್ರಧಾನಿ ಮೋದಿ ಬೆಂಗಳೂರಿಗೆ: ಕೆಂಪೇಗೌಡರ 108 ಅಡಿ ಪ್ರತಿಮೆ, ಏರ್ ಪೋರ್ಟ್ ನ 2ನೇ ಟರ್ಮಿನಲ್ ಉದ್ಘಾಟನೆ
ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 11ರಂದು ಬೆಂಗಳೂರಿಗೆ ಬರುತ್ತಿದ್ದಾರೆ. ಅದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ 2ನೇ ಟರ್ಮಿನಲ್ ಉದ್ಘಾಟನೆ, ಅದರ ಜೊತೆಗೆ ವಿಮಾನ ನಿಲ್ದಾಣದ ಅವರಣದಲ್ಲಿ ನಿರ್ಮಾಣವಾಗಿರುವ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.
Published: 18th October 2022 02:14 PM | Last Updated: 18th October 2022 04:57 PM | A+A A-

ಕೆಂಪೇಗೌಡರ ಪ್ರತಿಮೆ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 11ರಂದು ಬೆಂಗಳೂರಿಗೆ ಬರುತ್ತಿದ್ದಾರೆ. ಅದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ 2ನೇ ಟರ್ಮಿನಲ್ ಉದ್ಘಾಟಿಸಲು, ಅದರ ಜೊತೆಗೆ ವಿಮಾನ ನಿಲ್ದಾಣದ ಅವರಣದಲ್ಲಿ ನಿರ್ಮಾಣವಾಗಿರುವ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.
ಈ ಬಗ್ಗೆ ನಿನ್ನೆ ಉನ್ನತ ಶಿಕ್ಷಣ ಸಚಿವ ಡಾ ಸಿ ಎನ್ ಅಶ್ವಥ ನಾರಾಯಣ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರೂ ಆಗಿರುವ ಅವರು ನಿರ್ಮಲಾನಂದ ಶ್ರೀಗಳನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ನ.11ರಂದು ಕೆಂಪೇಗೌಡ ಏರ್ಪೋರ್ಟ್ ಮುಂದೆ ಸಮಾರಂಭ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ 108 ಅಡಿ ಎತ್ತರದ ಕೆಂಪೇಗೌಡ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.
The terminal 2 of the Kempegowda International Airport is set to be inaugurated by our Honourable PM on the 11th of November.
— Dr. Murugesh R Nirani (@NiraniMurugesh) October 18, 2022
Capturing the essence of Bengaluru as the garden city, the terminal is nothing short of a masterpiece. @BLRAirport pic.twitter.com/OFGenvrVDV
ನ.11ರಂದು ಕೆಐಎಬಿ ಮುಂದೆ ಕೆಂಪೇಗೌಡರ ಪ್ರತಿಮೆ ಅನಾವರಣ ಹಿನ್ನೆಲೆ ರಾಜ್ಯಾದ್ಯಂತ ಮೃತ್ತಿಕೆ ಸಂಗ್ರಹ ಅಭಿಯಾನಕ್ಕೆ ರಥಗಳು ಸಿದ್ದವಾಗಿದ್ದು, ಅಕ್ಟೋಬರ್ 21ರಂದು ವಿಧಾನಸೌಧದ ಮುಂಭಾಗ ರಥಗಳಿಗೆ ಸಿಎಂ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಅಭಿಯಾನ ಯಶಸ್ವಿ ಆಗುವಂತೆ ವಿಧಾನಸೌಧದಲ್ಲಿ ನಿನ್ನೆ ನಡೆದ ಡಿಸಿಗಳ ಸಭೆಯಲ್ಲಿ ಸಿಎಂ ಸೂಚನೆ ನೀಡಿದ್ದಾರೆ. ಅಭಿಯಾನದ ಯಶಸ್ಸಿಗೆ ಎಲ್ಲರೂ ಸೂಕ್ತ ವ್ಯವಸ್ಥೆ ಮಾಡಬೇಕೆಂದು ಸೂಚನೆ ನೀಡಲಾಗಿದೆ.
ಇಂದು ಬೆಂಗಳೂರು ವಿಶ್ವ ಮಾನ್ಯತೆಯನ್ನು ಪಡೆದುಕೊಂಡಿದೆ. ಕೋಟ್ಯಾಂತರ ಜನರಿಗೆ ಜೀವದ ಸೆಲೆಯಾಗಿದೆ. ಐಟಿ-ಬಿಟಿ ಹಬ್ ಆಗಿ, ರಾಜ್ಯದ ಆರ್ಥಿಕತೆಯ ಪ್ರಮುಖ ಮೂಲವಾಗಿ, ಕರ್ನಾಟಕಕ್ಕೆ ಕಳಶದಂತಿದೆ. ಇಂತಹ ನಗರವನ್ನು ನಿರ್ಮಿಸಿದ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಭವ್ಯ ಪ್ರತಿಮೆ ಸ್ವಲ್ಪ ದಿನದಲ್ಲೇ ಲೋಕಾರ್ಪಣೆಗೊಳ್ಳಲಿದೆ. pic.twitter.com/1UOTi3gi6G
— Dr. Murugesh R Nirani (@NiraniMurugesh) October 18, 2022