ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ: ವಾಹನ ಸವಾರರ ಪರದಾಟ

ಬೆಂಗಳೂರಿನಲ್ಲಿ ಬುಧವಾರ ರಾತ್ರಿ ಸುರಿದ ಗುಡುಗು ಸಹಿತ ಧಾರಾಕಾರ ಮಳೆಯಿಂದಾಗಿ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುವಂತಾಯಿತು. ರಾತ್ರಿ 9 ಗಂಟೆಗೆ ಆರಂಭವಾದ ಮಳೆ, 10-30ವರೆಗೂ ಬಿಡದೆ ಸುರಿದ ಪರಿಣಾಮ ರಸ್ತೆಗಳು ಜಲಾವೃತಗೊಂಡು, ವಾಹನ ಸವಾರರ ಪರದಾಡುವಂತಾಯಿತು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಬೆಂಗಳೂರಿನಲ್ಲಿ ಬುಧವಾರ ರಾತ್ರಿ ಸುರಿದ ಗುಡುಗು ಸಹಿತ ಧಾರಾಕಾರ ಮಳೆಯಿಂದಾಗಿ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುವಂತಾಯಿತು. ರಾತ್ರಿ 9 ಗಂಟೆಗೆ ಆರಂಭವಾದ ಮಳೆ,10-30ವರೆಗೂ ಬಿಡದೆ ಸುರಿದ ಪರಿಣಾಮ ರಸ್ತೆಗಳು ಜಲಾವೃತಗೊಂಡು, ವಾಹನ ಸವಾರರ ಪರದಾಡುವಂತಾಯಿತು.

ವಿಧಾನಸೌಧ, ಇಂಡಿಯನ್ ಎಕ್ಸ್ ಪ್ರೆಸ್, ಮೆಜೆಸ್ಟಿಕ್, ಶೇಷಾದ್ರಿಪುರಂ, ಶಾಂತಿನಗರ ಸೇರಿದಂತೆ ಹಲವೆಡೆ ಮಳೆಯಿಂದಾಗಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿ ಪ್ರಯಾಣಿಕರು ಮನೆಗೆ ತೆರಳಲು ಹರಸಾಹಸ ಪಡುವಂತಾಯಿತು. ಶಿವಾನಂದ ಸರ್ಕಲ್ ನ ರೈಲ್ವೆ ಅಂಡರ್ ಪಾಸ್ ಬಳಿ ನದಿಯಂತೆ ನೀರು ಹರಿದರಿಂದ ವಾಹನ ಸವಾರರ ಗೋಳು ಹೇಳ ತೀರದಂತಾಯಿತು.

ಈ ಮಧ್ಯೆ ಶೇಷಾದ್ರಿಪುರಂನ ಜೆಡಿಎಸ್ ಕಚೇರಿ ಬಳಿ ಮೆಟ್ರೋ ಕಾಂಪೌಂಡ್ ಕುಸಿದು ಐದರಿಂದ ಆರು ಕಾರುಗಳಿಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ. ಮಳೆಯಿಂದಾಗಿ ಕೆಲವೆಡೆ ಮರಗಳು ಧರೆಗುರುಳಿ ಬಿದಿದ್ದು, ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಯಿತು. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದರಿಂದ ನಿವಾಸಿಗಳು, ನೀರನ್ನು ಹೊರ ಹಾಕಲು ಹೆಣಗಾಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com