ಬೆಂಗಳೂರಿಗೆ ಬರುತ್ತಿದ್ದ ಲುಫ್ತಾನ್ಸಾ ವಿಮಾನ ಇಸ್ತಾನ್ಬುಲ್‌ನಲ್ಲಿ ತುರ್ತು ಭೂಸ್ಪರ್ಶ, 36 ಗಂಟೆ ತಡವಾಗಿ ಆಗಮನ

ಜರ್ಮನಿಯ ಫ್ರಾಂಕ್‌ಫರ್ಟ್‌ನಿಂದ ಬೆಂಗಳೂರಿಗೆ ಹೊರಟಿದ್ದ ಲುಫ್ತಾನ್ಸಾ ವಿಮಾನ ವೈದ್ಯಕೀಯ ತುರ್ತುಪರಿಸ್ಥಿತಿ ಹಿನ್ನೆಲೆಯಲ್ಲಿ ಮಂಗಳವಾರ (ಅಕ್ಟೋಬರ್ 18) ಟರ್ಕಿಯ ಇಸ್ತಾನ್ಬುಲ್‌ ನಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದ್ದು, ಅಂತಿಮವಾಗಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಜರ್ಮನಿಯ ಫ್ರಾಂಕ್‌ಫರ್ಟ್‌ನಿಂದ ಬೆಂಗಳೂರಿಗೆ ಹೊರಟಿದ್ದ ಲುಫ್ತಾನ್ಸಾ ವಿಮಾನ ವೈದ್ಯಕೀಯ ತುರ್ತುಪರಿಸ್ಥಿತಿ ಹಿನ್ನೆಲೆಯಲ್ಲಿ ಮಂಗಳವಾರ (ಅಕ್ಟೋಬರ್ 18) ಟರ್ಕಿಯ ಇಸ್ತಾನ್ಬುಲ್‌ ನಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದ್ದು, ಅಂತಿಮವಾಗಿ ನಿಗದಿತ ಸಮಯಕ್ಕಿಂತ 36 ಗಂಟೆ ತಡವಾಗಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ(ಕೆಐಎ)ಕ್ಕೆ ಗುರುವಾರ ಮಧ್ಯಾಹ್ನ ಆಗಮಿಸಿದೆ.

ಫ್ಲೈಟ್ LH 754 ಮಂಗಳವಾರ ಜರ್ಮನಿಯಿಂದ ಮಧ್ಯಾಹ್ನ 1.05 ಕ್ಕೆ ಹೊರಟಿತು ಮತ್ತು ಬುಧವಾರ ಬೆಳಗ್ಗೆ 1.25 ಕ್ಕೆ KIA ತಲುಪಬೇಕಿತ್ತು. ಬದಲಾಗಿ, ಟರ್ಕಿಯಲ್ಲಿ ತುರ್ತು ಭೂಸ್ಪರ್ಶ ಮಾಡಿತು. ಅಂತಿಮವಾಗಿ ಗರುವಾರ ಮಧ್ಯಾಹ್ನ 1.45ಕ್ಕೆ ಕೆಐಎ ತಲುಪಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ಖಚಿತಪಡಿಸಿವೆ.

ಈ ವಿಮಾನದಲ್ಲಿ ಎರಡು ಬಾರಿ ಗ್ರ್ಯಾಮಿ ಪ್ರಶಸ್ತಿ ವಿಜೇತ ರಿಕಿ ಕೇಜ್ ಸೇರಿದಂತೆ 300ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ವಿಮಾನ ತೀವ್ರ ವಿಳಂಬವಾಗಿದ್ದಕ್ಕೆ ಹಲವು ಪ್ರಯಾಣಿಕರು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಫ್ರಾಂಕ್‌ಫರ್ಟ್‌ನಿಂದ ಬೆಂಗಳೂರಿಗೆ ಹೊರಟಿದ್ದ ಲುಫ್ಥಾನ್ಸ ಫ್ಲೈಟ್ LH754/18 ವೈದ್ಯಕೀಯ ತುರ್ತು ಸ್ಥಿತಿಯ ಕಾರಣ ಮಾರ್ಗ ಬದಲಾಯಿಸಬೇಕಾಯಿತು. ಹಾರಾಟವನ್ನು ಮುಂದುವರಿಸುವ ಮೊದಲು ಸುರಕ್ಷತೆಯ ಕಾರಣಗಳಿಗಾಗಿ ವೈದ್ಯಕೀಯ ತುರ್ತುಸ್ಥಿತಿಗೆ ಚಿಕಿತ್ಸೆ ನೀಡಲು ಬಳಸುವ ಆಮ್ಲಜನಕ ಸಿಲಿಂಡರ್‌ಗಳನ್ನು ಬದಲಾಯಿಸಬೇಕಾಯಿತು. ಇದು ನಿರೀಕ್ಷೆಗಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತಿದೆ ಎಂದು ವಿಮಾನಯಾನ ಸಂಸ್ಥೆ ಟ್ವೀಟ್ ಮೂಲಕ ವಿಷಾದ ವ್ಯಕ್ತಪಡಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com