ಎಸ್ ಸಿ, ಎಸ್ ಟಿಗೆ ಮೀಸಲಾತಿ ಹೆಚ್ಚಳಕ್ಕೆ ಸುಗ್ರೀವಾಜ್ಞೆ, ರಾಜ್ಯ ಸಚಿವ ಸಂಪುಟದ ಅನುಮೋದನೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಾತಿಯನ್ನು ಹೆಚ್ಚಿಸುವ ಸುಗ್ರೀವಾಜ್ಞೆಗೆ  ರಾಜ್ಯ ಸಚಿವ ಸಂಪುಟ ಅಂಗೀಕಾರ ನೀಡಿದೆ. 
ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಾತಿಯನ್ನು ಹೆಚ್ಚಿಸುವ ಸುಗ್ರೀವಾಜ್ಞೆಗೆ  ರಾಜ್ಯ ಸಚಿವ ಸಂಪುಟ ಅಂಗೀಕಾರ ನೀಡಿದೆ. 

ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ  ನನ್ನ ಸಹೋದರ ಸಹೋದರಿಯರಿಗೆ ಮೀಸಲಾತಿಯನ್ನು ಕ್ರಮವಾಗಿ ಶೇ. 15 ರಿಂದ 17 ಮತ್ತು  ಹಾಗೂ  ಶೇ.3 ರಿಂದ 7ಕ್ಕೆ ಹೆಚ್ಚಿಸುವ ಸುಗ್ರೀವಾಜ್ಞೆ ಜಾರಿಗೊಳಿಸುವುದಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಐತಿಹಾಸಿಕ ನಿರ್ಧಾರವು ಅವರ ಬಾಳು ಬೆಳಗಲಿದ್ದು ಶಿಕ್ಷಣ ಹಾಗೂ ಉದ್ಯೋಗವಕಾಶದಲ್ಲಿ ಹೆಚ್ಚಿನ ಅವಕಾಶ ಒದಗಿಸುವ ಮೂಲಕ ಅವರ ಜೀವನ ಮಟ್ಟದಲ್ಲಿ ಸುಧಾರಣೆ ತರಲಿದೆ ಎಂದು ಮಾಹಿತಿ ನೀಡಿದ್ದಾರೆ.

ಇದಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ,  ರಾಜ್ಯ ಸರ್ಕಾರ ಎಸ್ಸಿ-ಎಸ್ಟಿ ಮೀಸಲಾತಿ ಹೆಚ್ಚಳವನ್ನು ಸಂವಿಧಾನದ ಷೆಡ್ಯೂಲ್ 9ರ ಅಡಿಯಲ್ಲಿ ತರುವ ಬಗ್ಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುವ ಬಗ್ಗೆಯೂ ಚರ್ಚೆಗಳು ನಡೆದಿವೆ.

ಆದರೆ, ಷೆಡ್ಯೂಲ್ 9ರ ಅಡಿ ಮೀಸಲಾತಿ ಜಾರಿಗೆ ಬಂದರೂ ಅದಕ್ಕೆ ಕಾನೂನಿನಡಿ ನ್ಯಾಯಾಲಯದಿಂದ ರಕ್ಷಣೆ ಸಿಗಬಹುದು ಎಂಬ ಖಾತ್ರಿ ಇಲ್ಲ. ಇದು ಸಂವಿಧಾನದ ತಿದ್ದುಪಡಿ. ಸಂಸತ್ ತೀರ್ಮಾನ ಆಗಬೇಕು ಈ ಹಿನ್ನೆಲೆಯಲ್ಲಿ ಮೀಸಲಾತಿ ಹೆಚ್ಚಳವನ್ನು ಸುಗ್ರೀವಾಜ್ಞೆ ಮೂಲಕ ಜಾರಿ ಮಾಡುವ ತೀರ್ಮಾನವನ್ನು ಸಂಪುಟ ಕೈಗೊಂಡಿದೆ ಎಂದು ತಿಳಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com