ಭಾರೀ ಮಳೆ: ಕುಸಿದ ಮೈಸೂರು ಮಹಾರಾಣಿ ವಿಜ್ಞಾನ ಕಾಲೇಜು ಕಟ್ಟಡ, ಕೂದಲೆಳೆ ಅಂತರದಲ್ಲಿ ಅಧ್ಯಾಪಕರು ಪಾರು!
ಭಾರೀ ಮಳೆಗೆ ಮೈಸೂರಿನ ಮಹಾರಾಣಿ ವಿಜ್ಞಾನ ಕಾಲೇಜು ಕಟ್ಟಡ ಕುಸಿದು ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಇಬ್ಬರು ಅಧ್ಯಾಪಕರು ಪಾರಾಗಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ.
Published: 21st October 2022 01:31 PM | Last Updated: 21st October 2022 06:20 PM | A+A A-

ಕುಸಿದಿರುವ ಕಟ್ಟಡ
ಮೈಸೂರು: ಭಾರೀ ಮಳೆಗೆ ಮೈಸೂರಿನ ಮಹಾರಾಣಿ ವಿಜ್ಞಾನ ಕಾಲೇಜು ಕಟ್ಟಡ ಕುಸಿದು ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಇಬ್ಬರು ಅಧ್ಯಾಪಕರು ಪಾರಾಗಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ.
ಮಹಾರಾಣಿ ಪದವಿ ಕಾಲೇಜಿನ ಕಟ್ಟಡ ಕುಸಿದು ಬಿದ್ದಿದ್ದು, ಕಟ್ಟಡದ ಕುಸಿದ ಭಾಗವು ರಸಾಯನ ವಿಜ್ಞಾನದ ಪ್ರಯೋಗಾಲಯದ ಕೊಠಡಿಯಾಗಿದೆ ಎಂದು ವರದಿಗಳು ತಿಳಿಸಿವೆ.
ಭಾರೀ ಮಳೆ: ಕುಸಿದ ಮೈಸೂರು ಮಹಾರಾಣಿ ಕಾಲೇಜು ಕಟ್ಟಡ, ಕೂದಲೆಳೆ ಅಂತರದಲ್ಲಿ ಅಧ್ಯಾಪಕರು ಪಾರು!
heavy rain: Maharani College building in Mysore collapsed#rain #MaharaniCollege #Mysore #ಮಳೆ #ಮೈಸೂರುಮಹಾರಾಣಿಕಾಲೇಜು #ಮೈಸೂರು pic.twitter.com/XMbXykOlJw— kannadaprabha (@KannadaPrabha) October 21, 2022
ವಿದ್ಯಾರ್ಥಿಗಳು 10.30ರ ವೇಳೆಗೆ ಬರುವರಿದ್ದರು. ಈ ವೇಳೆ ಬಿರುಕು ಮೂಡಿದ್ದನ್ನು ಗಮನಿಸಿದ ವಿಭಾಗದ ಮುಖ್ಯಸ್ಥ ಕೆ.ಕೆ.ಪದ್ಮನಾಭ 10.15ರ ವೇಳೆ ಪ್ರಾಂಶುಪಾಲರ ಗಮನಕ್ಕೆ ತಂದಿದ್ದಾರೆ. ಕೂಡಲೇ ಕೊಠಡಿಗೆ ಬಂದ ಪ್ರಾಂಶುಪಾಲ ಡಾ.ಡಿ.ರವಿ ಅವರು ಕೊಠಡಿಗೆ ಬೀಗ ಹಾಕಿಸಿದ್ದಲ್ಲದೆ, ಎಲೆಕ್ಟ್ರಿಕ್ ಸಂಪರ್ಕವನ್ನು ಕಡಿತಗೊಳಿಸಿ ಕಟ್ಟಡದ ಒಳಗೆ ಯಾರೂ ಪ್ರವೇಶಿಸದಂತೆ ಸೂಚನೆ ನೀಡಿದ್ದಾರೆ.
ಘಟನೆ ವೇಳೆ ಸ್ಥಳದಲ್ಲಿ ಯಾರೂ ಇಲ್ಲದ ಕಾರಣ, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಕುಸಿದು ಬಿದ್ದ ಕಟ್ಟಡದ ಕೆಳಗೆ ಯಾರೂ ಇಲ್ಲ ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ಖಚಿತಪಡಿಸಿಕೊಂಡಿದ್ದಾರೆ.
ಈ ನಡುವೆ ಕಾಲೇಜಿನ ಇತರೆ ಕಟ್ಟಡ ಕೂಡ ಇದೇ ಪರಿಸ್ಥಿತಿ ಇದ್ದು, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳಲ್ಲಿ ಆತಂಕ ಹೆಚ್ಚಾಗಿದೆ.