ಆದಾಯ ಮೀರಿ ಆಸ್ತಿ ಗಳಿಕೆ: ಮೈಸೂರು, ಕೊಡಗಿನಲ್ಲಿ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ!

ಲೋಕಾಯುಕ್ತ ಅಧಿಕಾರಿಗಳು ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಮೂವರು ಅಧಿಕಾರಿಗಳ ಮನೆ ಹಾಗೂ ಕಚೇರಿಗಳು ಸೇರಿದಂತೆ ಒಟ್ಟು 7 ಸ್ಥಳಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮೈಸೂರು: ಲೋಕಾಯುಕ್ತ ಅಧಿಕಾರಿಗಳು ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಮೂವರು ಅಧಿಕಾರಿಗಳ ಮನೆ ಹಾಗೂ ಕಚೇರಿಗಳು ಸೇರಿದಂತೆ ಒಟ್ಟು 7 ಸ್ಥಳಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. 

ಡಿಎಸ್‌ಪಿಗಳಾದ ಕೃಷ್ಣಯ್ಯ ಮಾಲ್ತೀಶ್, ಪವನ್ ಕುಮಾರ್, ಎಸ್​ಟಿ ಒಡೆಯರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಮಡಿಕೇರಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಪಿಡಬ್ಲ್ಯುಡಿ ಇಲಾಖೆ ಇಇ ಡಿ.ನಾಗರಾಜು ಅವರಿಗೆ ಸೇರಿದ ಮೈಸೂರಿನ ಕೆ‌ಸಿ ಬಡಾವಣೆ ನಿವಾಸದ ಮೇಲೆ ದಾಳಿ ನಡೆಸಲಾಗಿದೆ.  ದಾಳಿ ವೇಳೆ ಅಧಿಕಾರಿಗಳು ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ.

ಇದೇ ವೇಳೆ ನೀರಾವರಿ ಇಲಾಖೆಯ ಜ್ಯೂನಿಯರ್ ಇಂಜಿನಿಯರ್ ರಫೀಕ್ ರ ಕುಶಾಲನಗರದಲ್ಲಿರುವ​ ಮನೆಗೂ ಅಧಿಕಾರಿಗಳು ತೆರಳಿ ದಾಖಲೆಗಳ ಪರಿಶೀಲನೆ ನಡೆಸಿದೆ. ಮತ್ತೊಂದು ತಂಡ ಮಾದಾಪಟ್ಟಣದಲ್ಲಿರುವ ಪೊಲೀಸ್ ಇನ್​ಸ್ಪೆಕ್ಟರ್ ಎಂ.ಮಹೇಶ್ ಅವರಿಗೆ ಸೇರಿದ ಮನೆಯ ಮೇಲೂ ದಾಳಿ ನಡೆಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com