ಮುರುಘಾ ಶ್ರೀಗಳು
ರಾಜ್ಯ
ಮುರುಘಾ ಶ್ರೀ ನ್ಯಾಯಾಂಗ ಬಂಧನ ಅವಧಿ ನವೆಂಬರ್ 3 ರವರೆಗೆ ವಿಸ್ತರಣೆ
ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನಕ್ಕೊಳಾಗಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನ ವಿಸ್ತರಿಸಿ...
ಚಿತ್ರದುರ್ಗ: ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನಕ್ಕೊಳಾಗಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನ ವಿಸ್ತರಿಸಿ ಚಿತ್ರದುರ್ಗ ಕೋರ್ಟ್ ಶುಕ್ರವಾರ ಆದೇಶಿಸಿದೆ.
ಮುರುಘಾ ಶ್ರೀಗಳ ನ್ಯಾಯಾಂಗ ಬಂಧನದ ಅವಧಿ ಇಂದಿಗೆ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ, ಆರೋಪಿಯನ್ನು ಎರಡನೇ ಅಪರ ಮತ್ತು ಸತ್ರ ನ್ಯಾಯಾಧೀಶೆ ಬಿಕೆ ಕೋಮಲಾ ಅವರ ಮುಂದೆ ಹಾಜರುಪಡಿಸಲಾಯಿತು.
ವಿಚಾರಣೆ ನಡೆಸಿದ ನ್ಯಾಯಾಧೀಶೆ ಬಿಕೆ ಕೋಮಲಾ ಅವರು ಶ್ರೀಗಳ ನ್ಯಾಯಾಂಗ ಬಂಧನ ಅವಧಿಯನ್ನು ನವೆಂಬರ್ 3ರ ವರೆಗೆ ವಿಸ್ತರಿಸಿ ಆದೇಶಿಸಿದ್ದಾರೆ.
ಪ್ರಕರಣದ ಎರಡನೇ ಆರೋಪಿ ಹಾಸ್ಟೆಲ್ ವಾರ್ಡನ್ ರಶ್ಮಿ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಸಹ ಕೋರ್ಟ್ ನವೆಂಬರ್ 3ರ ವರೆಗೆ ವಿಸ್ತರಿಸಿ ಆದೇಶಿಸಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ