ಸರ್ಕಾರಿ ಶಾಲೆ ಮಕ್ಕಳಿಂದ ತಿಂಗಳಿಗೆ 100 ರೂ. ದೇಣಿಗೆ ಸಂಗ್ರಹಿಸುವ ಸುತ್ತೋಲೆ ವಾಪಸ್‌

ತೀವ್ರ ವಿರೋಧದ ನಂತರ ರಾಜ್ಯಾದ್ಯಂತ ಬಾರಿ ಚರ್ಚೆಗೆ ಗ್ರಾಸವಾಗಿದ್ದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಂದ 100 ರೂಪಾಯಿ ದೇಣಿಗೆ ಸಂಗ್ರಹಿಸಲು ಹೊರಡಿಸಿದ್ದ ಸುತ್ತೋಲೆಯನ್ನು ಶಿಕ್ಷಣ ಇಲಾಖೆ ಶನಿವಾರ ಹಿಂಪಡೆದಿದೆ.
ಬಿ.ಸಿ ನಾಗೇಶ್
ಬಿ.ಸಿ ನಾಗೇಶ್

ಬೆಂಗಳೂರು: ತೀವ್ರ ವಿರೋಧದ ನಂತರ ರಾಜ್ಯಾದ್ಯಂತ ಬಾರಿ ಚರ್ಚೆಗೆ ಗ್ರಾಸವಾಗಿದ್ದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಂದ 100 ರೂಪಾಯಿ ದೇಣಿಗೆ ಸಂಗ್ರಹಿಸಲು ಹೊರಡಿಸಿದ್ದ ಸುತ್ತೋಲೆಯನ್ನು ಶಿಕ್ಷಣ ಇಲಾಖೆ ಶನಿವಾರ ಹಿಂಪಡೆದಿದೆ.

ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಅಗತ್ಯವಿರುವ ಖರ್ಚು–ವೆಚ್ಚಗಳಿಗಾಗಿ ಪೋಷಕರಿಂದ ದೇಣಿಗೆಯಾಗಿ ಪ್ರತಿ ತಿಂಗಳು  100 ರೂ ಸಂಗ್ರಹಿಸಲು ಎಸ್‌ಡಿಎಂಸಿಗಳಿಗೆ ಅನುಮತಿ ನೀಡಿ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದರು. ಇದಕ್ಕೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಹಾಗೂ ವಿವಿಧ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು.

ತೀವ್ರ ವಿರೋಧದ ನಂತರ ಎಚ್ಚೆತ್ತುಕೊಂಡ ಶಿಕ್ಷಣ ಇಲಾಖೆ ಸುತ್ತೋಲೆಯನ್ನು ವಾಪಸ್ ಪಡೆದಿದೆ.

ಇಂದು ಬೆಳಗ್ಗೆಯಷ್ಟೇ ಈ ಬಗ್ಗೆ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು, ವಿದ್ಯಾರ್ಥಿಗಳಿಂದ 100 ರೂ ದೇಣಿಗೆ ಪಡೆಯುವ ಪ್ರಕರಣದಲ್ಲಿ ತಮ್ಮ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಯಾವುದೇ ರೀತಿಯ ಪಾತ್ರ ಇಲ್ಲ ಎಂದು ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com