
ಸಂಗ್ರಹ ಚಿತ್ರ
ಬೆಂಗಳೂರು: ಬೆಂಗಳೂರಿನಲ್ಲಿ 1,841 ಸೇರಿ ರಾಜ್ಯದಲ್ಲಿ ಒಟ್ಟು 10,899 ಮಸೀದಿಗಳಿಗೆ ಲೌಡ್ ಸ್ಪೀಕರ್ ಬಳಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.
ಮಸೀದಿ, ಮಂದಿರ ಹಾಗೂ ಚರ್ಚ್‍ಗಳಿಂದ ಧ್ವನಿವರ್ಧಕ ಬಳಕೆಗೆ 17 ಸಾವಿರಕ್ಕೂ ಅಧಿಕ ಅರ್ಜಿಗಳು ಬಂದಿದ್ದವು. ಇದರಲ್ಲಿ 10,889 ಮಸೀದಿಗಳು, 3 ಸಾವಿರಕ್ಕೂ ಹೆಚ್ಚು ಹಿಂದೂ ದೇವಾಲಯ, 1,400ಕ್ಕೂ ಹೆಚ್ಚು ಚರ್ಚ್‍ಗಳಿಗೆ ಸರ್ಕಾರ ಅನುಮತಿ ನೀಡಲಾಗಿದೆ. ಸರ್ಕಾರ 2 ವರ್ಷಗಳ ಅವಧಿಗೆ ಅನುಮತಿ ಸಿಕ್ಕಿದ್ದು, ಅನುಮತಿ ಪಡೆದ ಧಾರ್ಮಿಕ ಕೇಂದ್ರಗಳು 450 ರೂಪಾಯಿ ಶುಲ್ಕ ಪಾವತಿಸಬೇಕಿದೆ.
ಇದನ್ನೂ ಓದಿ: ಆಜಾನ್ ವಿವಾದ: ಶಬ್ದ ಮಾಲಿನ್ಯ ನಿಯಮ ಉಲ್ಲಂಘಿಸದಂತೆ ಮಸೀದಿಗಳಿಗೆ ಪೊಲೀಸರ ಸೂಚನೆ
ಹಿಂದೂ ಸಂಘಟನೆಗಳು ಮಸೀದಿಗಳಲ್ಲಿನ ಆಜಾನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮಸೀದಿ, ದೇವಸ್ಥಾನ ಹಾಗೂ ಚರ್ಚ್ ಗಳಲ್ಲಿ ಲೌಡ್ ಸ್ಪೀಕರ್ ಬಳಕೆ ನಿಷೇಧಿಸಬೇಕು ಹಾಗೂ ಧ್ವನಿವರ್ಧಕ ಬಳಕೆಯ ನಿಯಮ ರೂಪಿಸಬೇಕು ಎಂದು ಚರ್ಚೆಗಳು ನಡೆದಿದ್ದವು. ಈ ಹಿನ್ನೆಲೆಯಲ್ಲಿ ಮಸೀದಿ, ದೇವಸ್ಥಾನ ಹಾಗೂ ಚರ್ಚ್ ಗಳಲ್ಲಿ ಪರವಾನಗಿ ಇಲ್ಲದೇ ಧ್ವನಿವರ್ಧಕ ಬಳಕೆಗೆ ನಿರ್ಬಂಧ ವಿಧಿಸಲಾಗಿದ್ದು, ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗಳ ವಿವೇಚನೆಗೆ ಬಿಡಲಾಗಿತ್ತು.