ಕೆಂಪೇಗೌಡ ಪ್ರತಿಮೆ ರಾಜ್ಯವನ್ನು ಮತ್ತಷ್ಟು ಎತ್ತರಕ್ಕೆ ಏರಿಸಲಿದೆ: ಸಿಎಂ ಬೊಮ್ಮಾಯಿ
‘ಸಮೃದ್ಧಿಯ ಪ್ರತಿಮೆ’ ಎಂದು ಬಿಂಬಿತವಾಗಿರುವ ನಾಡಪ್ರಭು ಕೆಂಪೇಗೌಡರ ಪ್ರತಿಮೆಯು ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗೆ ಸ್ಫೂರ್ತಿಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಹೇಳಿದ್ದಾರೆ.
Published: 22nd October 2022 07:54 AM | Last Updated: 22nd October 2022 12:06 PM | A+A A-

ಕೆಂಪೇಗೌಡ ಪ್ರತಿಮೆಗೆ ಶುಕ್ರವಾರ ನಡೆದ ಪವಿತ್ರ ಮಣ್ಣು ಸಂಗ್ರಹ ಅಭಿಯಾನದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ಗಣ್ಯರು ಹಾಜರಿದ್ದರು.
ಬೆಂಗಳೂರು: ‘ಸಮೃದ್ಧಿಯ ಪ್ರತಿಮೆ’ ಎಂದು ಬಿಂಬಿತವಾಗಿರುವ ನಾಡಪ್ರಭು ಕೆಂಪೇಗೌಡರ ಪ್ರತಿಮೆಯು ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗೆ ಸ್ಫೂರ್ತಿಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಹೇಳಿದ್ದಾರೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ಬರುವ ನ.11 ರಂದು ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣದ ಜತೆಗೆ ಕೆಂಪಂಗೌಡರ ಥೀಮ್ ಪಾರ್ಕ್'ಗೆ ಬಳಸುವ ಉದ್ದೇಶದಿಂದ ಹಮ್ಮಿಕೊಂಡಿರುವ ಪವಿತ್ರ ಮೃತ್ತಿಕಾ (ಮಣ್ಣು) ಸಂಗ್ರಹಣಾ ಅಭಿಯಾನಕ್ಕೆ ಸಿಎಂ ಬೊಮ್ಮಾಯಿಯವರು ಹಸಿರು ನಿಶಾನೆ ನೀಡಿದರು.
ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಮೇಲೆ ಅಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಮತ್ತಿತರ ಗಣ್ಯರು ವಿಧಾನಸೌಧದ ಆವರಣದಲ್ಲಿರುವ ಎಲ್ಲಾ ಪ್ರತಿಮೆಗಳ ಸ್ಥಳದಿಂದ ಸಂಗ್ರಹಿಸಿದ ಮಣ್ಣು ಹಾಕುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.
ಇದನ್ನೂ ಓದಿ: ನ.11ಕ್ಕೆ ಪ್ರಧಾನಿ ಮೋದಿ ಬೆಂಗಳೂರಿಗೆ: ಕೆಂಪೇಗೌಡರ 108 ಅಡಿ ಪ್ರತಿಮೆ, ಏರ್ ಪೋರ್ಟ್ ನ 2ನೇ ಟರ್ಮಿನಲ್ ಉದ್ಘಾಟನೆ
ಈ ವೇಳೆ ಮಾತನಾಡಿದ ಮುಖ್ಯಮಂತ್ರಿಗಳು, ಕೆಂಪೇಗೌಡರು ಮಹಾನ್ ದಾರ್ಶನಿಕರಾಗಿದ್ದರು. ನವೆಂಬರ್ 11 ರಂದು ಪ್ರಧಾನಿ ನರೇಂದ್ರ ಮೋದಿ ಅವರು 108 ಅಡಿ ಕೆಂಪೇಗೌಡರ ಪ್ರತಿಮೆಯನ್ನು ಅನಾವರಣಗೊಳಿಸಲಾಗುವುದು.
ಬೆಂಗಳೂರು ನಗರಕ್ಕೆ ಬುನಾದಿ ಹಾಕಿದವರು ಕೆಂಪೇಗೌಡರು, ಸಾಮಾಜಿಕ ನ್ಯಾಯಕ್ಕೆ ಪ್ರಾಧಾನ್ಯತೆ ನೀಡಿದರು. 'ಸಮೃದ್ಧಿಯ ಪ್ರತಿಮೆ' ಎಂದು ಸೂಕ್ತವಾಗಿ ಹೆಸರಿಸಲಾಗಿದೆ ಮತ್ತು ಬೆಂಗಳೂರು ನಗರವು ಅತ್ಯಂತ ಎತ್ತರಕ್ಕೆ ಬೆಳೆಯಬೇಕು ಎಂಬ ಸರ್ಕಾರದ ಆಶಯವನ್ನು ಇದು ಸಂಕೇತಿಸುತ್ತದೆ ಎಂದು ಹೇಳಿದರು.
ಐಟಿ/ಬಿಟಿ ಹಾಗೂ ಉನ್ನತ ಶಿಕ್ಷಣ ಸಚಿವ ಹಾಗೂ ಕೆಂಪೇಗೌಡ ಪಾರಂಪರಿಕ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಮಾತನಾಡಿ, ಕೆಂಪೇಗೌಡ ಥೀಮ್ ಪಾರ್ಕ್ ಅಭಿವೃದ್ಧಿಗೆ ರಾಜ್ಯಾದ್ಯಂತ ಮಣ್ಣನ್ನು ಬಳಸುತ್ತಿರುವುದು ರಾಜ್ಯದ ಏಕತೆಯನ್ನು ಸಂಕೇತಿಸುತ್ತದೆ ಎಂದು ತಿಳಿಸಿದರು.