ಬೆಂಗಳೂರು ವಿ.ವಿ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿ ಆ್ಯಕ್ಸಿಡೆಂಟ್ ಪ್ರಕರಣ: ಚಿಕ್ಸಿತೆ ಫಲಕಾರಿಯಾಗದೆ ಶಿಲ್ಪ ಸಾವು

ಕಳೆದ ಅಕ್ಟೋಬರ್‌ 10ರಂದು ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಬಿಎಂಟಿಸಿ ಬಸ್ ಹರಿದು ಶಿಲ್ಪಾ ಎಂಬ ವಿದ್ಯಾರ್ಥಿನಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದರು.
ಮೃತ ವಿದ್ಯಾರ್ಥಿನಿ ಶಿಲ್ಪಶ್ರೀ
ಮೃತ ವಿದ್ಯಾರ್ಥಿನಿ ಶಿಲ್ಪಶ್ರೀ

ಬೆಂಗಳೂರು: ಕಳೆದ ಅಕ್ಟೋಬರ್‌ 10ರಂದು ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಬಿಎಂಟಿಸಿ ಬಸ್ ಹರಿದು ಶಿಲ್ಪಾ ಎಂಬ ವಿದ್ಯಾರ್ಥಿನಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಶಿಲ್ಪಾ ಇಂದು ಮುಂಜಾನೆ 4:30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.  

ಶಿಲ್ಪಶ್ರೀ ಬೆಂಗಳೂರು ವಿಶ್ವವಿದ್ಯಾಲಯದ ಎಂಎಸ್ಸಿ ಗಣಿತ ವಿಷಯದ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಬೆಳಗ್ಗೆ 10.30ರ ಸುಮಾರಿಗೆ ಜ್ಞಾನಭಾರತಿ ಕ್ಯಾಂಪಸ್‌ನ ಮುಖ್ಯರಸ್ತೆಯಲ್ಲಿ ಬಿಎಂಟಿಸಿ ಬಸ್‌ಗಾಗಿ ಕಾಯುತ್ತಿದ್ದರು.

ಈ ವೇಳೆ ಬಸ್‌ ಬಂದಿದ್ದು, ಶಿಲ್ಪಾಶ್ರೀ ಬಸ್‌ನ ಮಧ್ಯದ ಬಾಗಿಲಿನಲ್ಲಿ ಬಸ್‌ ಏರಲು ಮುಂದಾಗಿದ್ದಾರೆ. ಈ ವೇಳೆ ಬಸ್‌ ಏಕಾಏಕಿ ಮುಂದೆ ಚಲಿಸಿದ್ದರಿಂದ ಶಿಲ್ಪಾಶ್ರೀ ಆಯತಪ್ಪಿ ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಬಸ್‌ನ ಎಡಭಾಗದ ಹಿಂಬದಿ ಚಕ್ರ ಶಿಲ್ಪಾಶ್ರೀಯ ಸೊಂಟದ ಎಡ ತೊಡೆಯ ಮೇಲೆ ಉರುಳಿದೆ.

ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಬನ್ನೇರುಘಟ್ಟದ ಫೋರ್ಟೀಸ್ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಕಳೆದ 14 ದಿನಗಳಿಂದ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿನಿ ಇಂದು ಚಿಕ್ಸಿತೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಕೋಲಾರ ಜಿಲ್ಲೆಯ ಕೆಜಿಎಫ್ ಮೂಲದ ಶಿಲ್ಪಾ ಶ್ರೀಧರ್ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಪ್ರಥಮ ಎಂಎಸ್ಸಿ ಗಣಿತ ಶಾಸ್ತ್ರದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಕಳೆದ 14 ದಿನಗಳಿಂದ ಜೀವನ್ಮರಣದ ನಡುವೆ ಹೋರಾಟ ನಡೆಸಿದ್ದರು.

ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿ ಮೇಲೆ ಬಿಎಂಟಿಸಿ ಬಸ್‌ ಹರಿದು ಗಂಭೀರ ಗಾಯಗೊಂಡ ಹಿನ್ನೆಲೆ ಕ್ಯಾಂಪಸ್‌ ರಸ್ತೆ ಬಂದ್‌ ಮಾಡಿ ವಿದ್ಯಾರ್ಥಿಗಳು ಅಹೋರಾತ್ರಿ ಪ್ರತಿಭಟನೆ ನಡೆಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com