ಒಂದು ವರ್ಷದಲ್ಲಿ ಮಹದಾಯಿಯಿಂದ ಕರ್ನಾಟಕಕ್ಕೆ ಲಾಭ: ಪ್ರಹ್ಲಾದ್ ಜೋಶಿ
ಮಹದಾಯಿ ಯೋಜನೆ ಕುರಿತು ಸರ್ಕಾರಕ್ಕೆ ಅರಿವಿದ್ದು, ಶೀಘ್ರ ಅನುಷ್ಠಾನಕ್ಕೆ ಎಲ್ಲ ಪ್ರಯತ್ನ ನಡೆಸಲಾಗುತ್ತಿದೆ’ ಎಂದು ಕೇಂದ್ರ ಸಚಿವ ಹಾಗೂ ಧಾರವಾಡ ಸಂಸದ ಪ್ರಹ್ಲಾದ ಜೋಶಿ ಅವರು ಭಾನುವಾರ ಹೇಳಿದ್ದಾರೆ.
Published: 24th October 2022 07:18 AM | Last Updated: 24th October 2022 12:57 PM | A+A A-

ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ: ‘ಮಹದಾಯಿ ಯೋಜನೆ ಕುರಿತು ಸರ್ಕಾರಕ್ಕೆ ಅರಿವಿದ್ದು, ಶೀಘ್ರ ಅನುಷ್ಠಾನಕ್ಕೆ ಎಲ್ಲ ಪ್ರಯತ್ನ ನಡೆಸಲಾಗುತ್ತಿದೆ’ ಎಂದು ಕೇಂದ್ರ ಸಚಿವ ಹಾಗೂ ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಅವರು ಭಾನುವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಯೋಜನೆ ಅನುಷ್ಠಾನದ ವಿವರಗಳ ಕುರಿತು ಕಾರ್ಯಾಗಾರಗಳ ಮೂಲಕ ಜನರು ಒತ್ತಾಯಿಸುತ್ತಿದ್ದಾರೆ. ಯೋಜನೆಯ ವಿನ್ಯಾಸ ತೆಗೆದುಕೊಂಡು ಜನರು ಏನು ಮಾಡುತ್ತಾರೆ? ಅವರಿಗೆ ನೀರು ಬೇಕು ಮತ್ತು ಅದು ಒಂದು ವರ್ಷದೊಳಗೆ ಬರುತ್ತದೆ. ನೀರಾವರಿ ಸಚಿವ ಗೋವಿಂದ ಕಾರಜೋಳ ಅತ್ಯುತ್ತಮ ಕೆಲಸ ಮಾಡುತ್ತಿದ್ದಾರೆ. ಆಧುನಿಕ ತಂತ್ರಜ್ಞಾನದ ನೆರವಿನಿಂದ ಯೋಜನಾ ಕಾಮಗಾರಿ ವೇಳೆ ಅರಣ್ಯ ಉಳಿಸುವ ಪ್ರಯತ್ನ ಮಾಡಲಾಗುತ್ತಿದೆ’ ಎಂದು ಹೇಳಿದರು.
ಇದನ್ನೂ ಓದಿ: ವರ್ಷಾಂತ್ಯದಲ್ಲಿ ಮಹದಾಯಿಗೆ ಚಾಲನೆ: ಕೇಂದ್ರದ ಬೆನ್ನು ಬಿದ್ದ ಸಿಎಂ ಬೊಮ್ಮಾಯಿ
ಇದೇ ವೇಳೆ ಮಹದಾಯಿ ಯೋಜನೆ ಅನುಷ್ಠಾನ ಕುರಿತು ಕಾರ್ಯಾಗಾರ ಆಯೋಜಿಸಿದ್ದ ಮಾಜಿ ಶಾಸಕ ಎನ್.ಎಚ್.ಕೋನರಡ್ಡಿ ಅವರನ್ನು ತರಾಟೆಗೆ ತೆಗೆದುಕೊಂಡ ಜೋಶಿ, ಕೆಲ ನಿರುದ್ಯೋಗಿಗಳು ಇಂತಹ ಕಾರ್ಯಾಗಾರಗಳನ್ನು ನಡೆಸುತ್ತಿದ್ದಾರೆಂದು ಹೇಳಿದರು.
ಜೋಶಿಯವರ ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಕೋನರೆಡ್ಡಿ ಅವರು, ನಾವು ನಿರುದ್ಯೋಗಿಗಳಾಗಿದ್ದರೆ, ಜೋಶಿ ಅವರು ಅಧಿಕಾರದಲ್ಲಿದ್ದಾರೆ ಮತ್ತು ಕೆಲಸದಲ್ಲಿದ್ದಾರೆ. ಅವರು ಸೂಕ್ತ ಮನೋಭಾವದಿಂದ ಯೋಜನೆಯನ್ನು ಜಾರಿಗೊಳಿಸಬೇಕೆಂದು ನಾವು ಒತ್ತಾಯಿಸುತ್ತೇನೆಂದು ತಿಳಿಸಿದರು.