ಕಡಜ
ರಾಜ್ಯ
ಮಂಗಳೂರು: ಸೌದೆ ಸಂಗ್ರಹಿಸುತ್ತಿದ್ದಾಗ ದಾಳಿ ಮಾಡಿದ ಕಡಜಗಳ ಹಿಂಡು, ಮಹಿಳೆ ಸಾವು
ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಕಡಜಗಳ ಹಿಂಡು ದಾಳಿ ನಡೆಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಮಂಗಳೂರು: ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಕಡಜಗಳ ಹಿಂಡು ದಾಳಿ ನಡೆಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ದಿನಗೂಲಿ ನೌಕರರಾದ ಮೀನಾಕ್ಷಿ ಎಂಬುವವರು ಎರಡು ದಿನಗಳ ಹಿಂದೆ ರಸ್ತೆ ಬದಿಯಲ್ಲಿ ಒಣ ಕೊಂಬೆಗಳನ್ನು ಸಂಗ್ರಹಿಸುತ್ತಿದ್ದಾಗ ಕಣಜಗಳ ದಾಳಿಗೆ ಒಳಗಾಗಿದ್ದರು.
ಆಕೆ ಸಂಗ್ರಹಿಸಿದ ಕೊಂಬೆಗಳಲ್ಲಿದ್ದ ಕಡಜಗಳ ಹಿಂಡು ಆಕೆಯ ಮೇಲೆ ದಾಳಿ ನಡೆಸಿವೆ. ಕೂಡಲೇ ಸಮೀಪದ ಮನೆಗೆ ತೆರಳಿ ಪ್ರಾಥಮಿಕ ಚಿಕಿತ್ಸೆ ಪಡೆದಿದ್ದಾರೆ.
ಬಳಿಕ ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಮಹಿಳೆ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ