ಬೆಂಗಳೂರು ವಿಶ್ವವಿದ್ಯಾಲಯ
ಬೆಂಗಳೂರು ವಿಶ್ವವಿದ್ಯಾಲಯ

ವಿಶ್ವವಿದ್ಯಾಲಯದ ಹಾಸ್ಟೆಲ್ ನಲ್ಲಿರುವ ಅನಧಿಕೃತ ವಿದ್ಯಾರ್ಥಿಗಳನ್ನು ಹೊರ ಹಾಕಿ: ಬೆಂಗಳೂರು ವಿವಿ ಸೂಚನೆ

ವಿಶ್ವವಿದ್ಯಾಲಯದ ಹಾಸ್ಟೆಲ್ ಗಳಲ್ಲಿ ಅನಧಿಕೃತವಾಗಿ ವಾಸಿಸುತ್ತಿರುವ ವಿದ್ಯಾರ್ಥಿಗಳು ಮತ್ತು ವ್ಯಕ್ತಿಗಳನ್ನು ಹೊರ ಹಾಕಬೇಕು ಎಂದು ಬೆಂಗಳೂರು ವಿಶ್ವವಿದ್ಯಾಲಯ ಸುತ್ತೋಲೆ ಹೊರಡಿಸಿದೆ.
Published on

ಬೆಂಗಳೂರು: ವಿಶ್ವವಿದ್ಯಾಲಯದ ಹಾಸ್ಟೆಲ್ ಗಳಲ್ಲಿ ಅನಧಿಕೃತವಾಗಿ ವಾಸಿಸುತ್ತಿರುವ ವಿದ್ಯಾರ್ಥಿಗಳು ಮತ್ತು ವ್ಯಕ್ತಿಗಳನ್ನು ಹೊರ ಹಾಕಬೇಕು ಎಂದು ಬೆಂಗಳೂರು ವಿಶ್ವವಿದ್ಯಾಲಯ ಸುತ್ತೋಲೆ ಹೊರಡಿಸಿದೆ.

ಬೆಂಗಳೂರು ವಿಶ್ವವಿದ್ಯಾಲಯದ ಎಲ್ಲ ವಿದ್ಯಾರ್ಥಿ ನಿಲಯಗಳಲ್ಲಿ ಅನಧಿಕೃತವಾಗಿ ತಂಗಿರುವ ವಿದ್ಯಾರ್ಥಿಗಳು ಹಾಗೂ ವ್ಯಕ್ತಿಗಳನ್ನು ಕೂಡಲೇ ತೆರವುಗೊಳಿಸಬೇಕು ಮತ್ತು ಸಂಬಂಧಪಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ವಿದ್ಯಾರ್ಥಿ ನಿಲಯದ ಕ್ಷೇಮಪಾಲಕರಿಗೆ ಉಪಕುಲಪತಿಗಳು ಸೂಚನೆ ನೀಡಿದ್ದಾರೆ.

ವಿಶ್ವವಿದ್ಯಾಲಯದ ವಿದ್ಯಾರ್ಥಿ ನಿಲಯಗಳಲ್ಲಿ ಅನಧಿಕೃತವಾಗಿ ಕೆಲ ವ್ಯಕ್ತಿಗಳು, ವಿದ್ಯಾರ್ಥಿಗಳು ವಾಸಿಸುತ್ತಿರುವ ವಿಷಯವು ಗಮನಕ್ಕೆ ಬಂದಿದೆ. ಇದರಿಂದ ಹಾಸ್ಟೆಲ್‌ಗಳಲ್ಲಿ ಪದೇ ಪದೇ ವಿದ್ಯಾರ್ಥಿಗಳ ನಡುವೆ ಸಂಘರ್ಷಕ್ಕೆ ಕಾರಣವಾಗುತ್ತಿರುವ ಬಗ್ಗೆ ದೂರುಗಳು ಸಲ್ಲಿಕೆಯಾಗಿವೆ. ಕೆಲವು ವಿದ್ಯಾರ್ಥಿಗಳು ಸೂಕ್ತ ರಕ್ಷಣೆಗಾಗಿ ವಿಶ್ವವಿದ್ಯಾಲಯ ಹಾಗೂ ಜ್ಞಾನಭಾರತಿ ಪೊಲೀಸ್‌ ಠಾಣೆಗೆ ಮನವಿ ಸಲ್ಲಿಸಿದ್ದಾರೆ.

ಇಂತಹ ಘಟನೆಗಳು ವಿಶ್ವವಿದ್ಯಾಲಯಕ್ಕೆ ಶೋಭೆ ತರುವ ವಿಷಯವಲ್ಲ ಹಾಗೂ ವಿವಿ ಆವರಣದೊಳಗೆ ಶೈಕ್ಷಣಿಕ ವಾತಾವರಣ ಪೂರಕವಾಗಿಲ್ಲ. ಹಾಸ್ಟೆಲ್‌ನಲ್ಲಿ ಅನಧಿಕೃತವಾಗಿ ನೆಲೆಸಿರುವ ವ್ಯಕ್ತಿಗಳ ಪ್ರಚೋದನೆಯಿಂದಲೇ ಅಹಿತಕರ ಘಟನೆಗಳು ಸಂಭವಿಸುವ ಸಾಧ್ಯತೆಗಳಿವೆ. ಅನಧಿಕೃತ ವ್ಯಕ್ತಿಗಳು, ವಿದ್ಯಾರ್ಥಿಗಳು ವಾಸಿಸುತ್ತಿರುವುದರಿಂದ ಅಧಿಕೃತ ವಿದ್ಯಾರ್ಥಿಗಳಿಗೆ ಮೂಲ ಸೌಕರ್ಯದ ಕೊರತೆ ಹಾಗೂ ಅವರ ಭದ್ರತೆಗೆ ತೊಡಕುಂಟಾಗಿದೆ. ಈ ಎಲ್ಲ ಕಾರಣಗಳಿಂದಾಗಿ ವಿದ್ಯಾರ್ಥಿ ನಿಲಯಗಳಲ್ಲಿ ಸೌಹಾರ್ದತೆ, ಶಿಸ್ತು ಹಾಗೂ ಶೈಕ್ಷಣಿಕ ವಾತಾವರಣವನ್ನು ಕಾಪಾಡುವ ದೃಷ್ಟಿಯಿಂದ ಅನಧಿಕೃತ ವ್ಯಕ್ತಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಸೂಚಿಸಿದ್ದಾರೆ.

ಮೃತ ಶಿಲ್ಪಾ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹ
ಈ ನಡುವೆ ಬಿಎಂಟಿಸಿ ಬಸ್'ಗೆ ಸಿಲುಕಿ ಮೃತಪಟ್ಟ ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಶಿಲ್ಪಾಗೆ ಪರಿಹಾರ ನೀಡುವಂತೆ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ವಿದ್ಯಾರ್ಥಿಗೆ ಪರಿಹಾರ ನೀಡದೇ ಹೋದಲ್ಲಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. 

ಅಪಘಾತದ ನಂತರ ಎರಡು ವಾರಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ್ದ ಶಿಲ್ಪಾ ಅವರು, ಭಾನುವಾರ ಮುಂಜಾನೆ ಕೊನೆಯುಸಿರೆಳೆದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Google Preferred source

Advertisement

X
Kannada Prabha
www.kannadaprabha.com