ಶಿವಮೊಗ್ಗ: ಸಾವರ್ಕರ್ ಕಾರ್ಯಕ್ರಮಕ್ಕೆ ತೆರಳಿದ್ದವರ ಮೇಲೆ ಹಲ್ಲೆ, ಪೊಲೀಸರಿಂದ ಬಿಗಿ ಬಂದೋಬಸ್ತ್

ಶಿವಮೊಗ್ಗದಲ್ಲಿ ಕೋಮು ಸೌಹಾರ್ದತೆ ದೃಷ್ಟಿಯಿಂದ ಮತ್ತೆ ಪರಿಸ್ಥಿತಿ ಹದಗೆಡುವ ಲಕ್ಷಣಗಳು ಗೋಚರಿಸಿದ್ದು ಸಾವರ್ಕರ್ ಕಾರ್ಯಕ್ರಮಕ್ಕೆ ಹೋಗಿದ್ದ ವ್ಯಕ್ತಿ ಮೇಲೆ ದಾಳಿ ನಡೆಸಿದ ಮೂವರು ವ್ಯಕ್ತಿಗಳು ಆರ್ ಎಸ್ಎಸ್ ವಿರೋಧಿ ಘೋಷಣೆ ಕೂಗಿದ್ದಾರೆ.
ಆ.15 ರಂದು ಸಾವರ್ಕರ್ ಪೋಸ್ಟರ್ ಗೆ ಸಂಬಂಧಿಸಿದಂತೆ ಅಮೀರ್ ಅಹ್ಮದ್ ವೃತ್ತದಲ್ಲಿ ಪೊಲೀಸರೊಂದಿಗೆ ವಾಗ್ವಾದ ನಡೆಸುತ್ತಿರುವ ಗುಂಪು
ಆ.15 ರಂದು ಸಾವರ್ಕರ್ ಪೋಸ್ಟರ್ ಗೆ ಸಂಬಂಧಿಸಿದಂತೆ ಅಮೀರ್ ಅಹ್ಮದ್ ವೃತ್ತದಲ್ಲಿ ಪೊಲೀಸರೊಂದಿಗೆ ವಾಗ್ವಾದ ನಡೆಸುತ್ತಿರುವ ಗುಂಪು
Updated on

ಶಿವಮೊಗ್ಗ: ಶಿವಮೊಗ್ಗದಲ್ಲಿ ಕೋಮು ಸೌಹಾರ್ದತೆ ದೃಷ್ಟಿಯಿಂದ ಮತ್ತೆ ಪರಿಸ್ಥಿತಿ ಹದಗೆಡುವ ಲಕ್ಷಣಗಳು ಗೋಚರಿಸಿದ್ದು ಸಾವರ್ಕರ್ ಕಾರ್ಯಕ್ರಮಕ್ಕೆ ಹೋಗಿದ್ದ ವ್ಯಕ್ತಿ ಮೇಲೆ ದಾಳಿ ನಡೆಸಿದ ಮೂವರು ವ್ಯಕ್ತಿಗಳು ಆರ್ ಎಸ್ಎಸ್ ವಿರೋಧಿ ಘೋಷಣೆ ಕೂಗಿದ್ದಾರೆ. 

ಈ ಘಟನೆಯಿಂದ ಎಚ್ಚೆತ್ತಿರುವ ಶಿವಮೊಗ್ಗ ಪೊಲೀಸರು, ನಗರದಲ್ಲಿ  ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಈ ವರ್ಷ ಫೆ.20 ರಂದು ಶಿವಮೊಗ್ಗದಲ್ಲಿ ಹಿಂದು ಕಾರ್ಯಕರ್ತ ಹರ್ಷನ ಹತ್ಯೆಯಾಗಿತ್ತು.

ಈಗ ದಾಳಿಗೆ ಒಳಗಾದ ವ್ಯಕ್ತಿ ಪ್ರಕಾಶ್ ತಮ್ಮ ಮೇಲೆ ದಾಳಿ ಮಾಡಿದವರು ಸ್ಥಳೀಯರಲ್ಲ ಎಂದು ಹೇಳಿದ್ದು ತಾವು ಸಾವರ್ಕರ್ ಅವರಿಗೆ ಸಂಬಂಧಿಸಿದ ಕಾರ್ಯಕ್ರಮ ಮುಗಿಸಿ ಬರುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಹೇಳಿದ್ದಾರೆ.

ಭರಮಪ್ಪ ಲೇಔಟ್ ನಲ್ಲಿ ದಾಳಿ ನಡೆದಿದ್ದು ಬೈಕ್ ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಈ ಕೃತ್ಯ ಎಸಗಿ ಆರ್ಎಸ್ಎಸ್ ಹಾಗೂ ಹಿಂದೂ ಕಾರ್ಯಕರ್ತರ ವಿರುದ್ಧ ಘೋಷಣೆ ಕೂಗಿದ್ದಾರೆ. ದಾಳಿಯಲ್ಲಿ ಪ್ರಕಾಶ್ ತಲೆಗೆ ಪೆಟ್ಟು ಬಿದ್ದಿದ್ದು, ಆತ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com