ಬೆಳಗಾವಿ: ಕಲುಷಿತ ನೀರು ಸೇವಿಸಿ ವೃದ್ಧ ಸಾವು, 94 ಜನ ಅಸ್ವಸ್ಥ; ನಾಲ್ಕು ಮಂದಿ ಗಂಭೀರ

ಮುದೇನೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಶಿವಪ್ಪ ಬೆಳ್ಳೆರಿ ಎಂಬ ವ್ಯಕ್ತಿ ಮೃತಪಟ್ಟಿದ್ದು, ರಾಜ್ಯ ಸರ್ಕಾರ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಳಗಾವಿ: ಮುದೇನೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಶಿವಪ್ಪ ಬೆಳ್ಳೆರಿ ಎಂಬ ವ್ಯಕ್ತಿ ಮೃತಪಟ್ಟಿದ್ದು, ರಾಜ್ಯ ಸರ್ಕಾರ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಮುದೇನೂರ ಗ್ರಾಮದಲ್ಲಿ ಘಟನೆ ನಡೆದಿದೆ. ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಒಬ್ಬರು ವೃದ್ಧರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದು, 94 ಜನರು ಅಸ್ವಸ್ಥಗೊಂಡಿದ್ದಾರೆ. ಇವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಬಾಗಲಕೋಟ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಪ್ರಕರಣ ಸಂಬಂಧ ಮಾತನಾಡಿದ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಮೃತರ ಕುಟುಂಬಸ್ಥರಿಗೆ 10 ಲಕ್ಷ ರೂ. ಪರಿಹಾರ ನೀಡಲು ಸೂಚಿಸಿರುವುದಾಗಿ ಹೇಳಿದ್ದಾರೆ.

ಬೋರ್ ವೆಲ್ ಹಾಗು ಆರ್.ಓ ಫಿಲ್ಟರ್ ನೀರು ಕುಡಿಯಬೇಕೆಂದು ಸಾಕಷ್ಟು ಮನವಿ ಮಾಡಿದ್ದರೂ, ಕೆಲವು ಗ್ರಾಮಸ್ಥರು ಟ್ಯಾಪ್ ನೀರು ಕುಡಿದ ಕಾರಣ ಈ ಅವಘಡ ಸಂಭವಿಸಿದೆ. ಇನ್ನಾದರೂ ಗ್ರಾಮಸ್ಥರು ಎಚ್ಚರದಿಂದ ಇರಬೇಕು ಎಂದು ಸಚಿವ ಕಾರಜೋಳ ತಿಳಿಸಿದ್ದಾರೆ.

ಕುಡಿಯುವ ನೀರು ಪೂರೈಕೆಯ ಪೈಪ್ ಅಲ್ಲಲ್ಲಿ ಒಡೆದು ಚರಂಡಿಯ ನೀರು ಅದಕ್ಕೆ ಸೇರ್ಪಡೆಯಾಗುತ್ತಿತ್ತು. ಇದನ್ನು ಕುಡಿದ ಮುದೇನೂರು ಗ್ರಾಮದ ಬಸವಣ್ಣ ದೇವರ ಗುಡಿ ಓಣಿ, ಲಕ್ಕಮ್ಮದೇವಿ ಗುಡಿ ಓಣಿ, ಬೀರದೇವರ ಗುಡಿ ಓಣಿಯ 94 ನಿವಾಸಿಗಳು ಅಸ್ವಸ್ಥರಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com