ಆಕಾಶದಲ್ಲಿ ಮೊಳಗಿದ ಕೋಟಿ ಕಂಠ ಗಾಯನ, ಕನ್ನಡಾಭಿಮಾನ ಮೆರೆದ ವಿಮಾನ ಸಿಬ್ಬಂದಿ, ಪ್ರಯಾಣಿಕರು!

67ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಆಯೋಜಿಸಿರುವ 'ಕೋಟಿ ಕಂಠ ಗಾಯನ' ಕಾರ್ಯಕ್ರಮಕ್ಕೆ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು, ಆಕಾಶದಲ್ಲೂ ಗಾಯನ ಮೊಳಗಿದೆ.
ವಿಮಾನದ  ಸಿಬ್ಬಂದಿ, ಪ್ರಯಾಣಿಕರು
ವಿಮಾನದ ಸಿಬ್ಬಂದಿ, ಪ್ರಯಾಣಿಕರು

ಬೆಂಗಳೂರು: 67ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಆಯೋಜಿಸಿರುವ ' ಕೋಟಿ ಕಂಠ ಗಾಯನ' ಕಾರ್ಯಕ್ರಮಕ್ಕೆ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು, ಆಕಾಶದಲ್ಲೂ ಗಾಯನ ಮೊಳಗಿದೆ.

ಇಂದು ಬೆಳ್ಳಂಬೆಳಗ್ಗೆಯೇ ಸ್ಪೈಸ್ ಜೆಟ್ ನಲ್ಲಿ ವಿಮಾನದ ಸಿಬ್ಬಂದಿ ಹಾಗೂ ಪ್ರಯಾಣಿಕರು 'ಕೋಟಿ ಕಂಠ ಗಾಯನ' ಕಾರ್ಯಕ್ರಮಕ್ಕೆ ಬೆಂಬಲ ಸೂಚಿಸುವ ಭಾಗವಾಗಿ ಒಟ್ಟಿಗೆ ಕನ್ನಡ ಹಾಡನ್ನು ಹಾಡಿದ್ದಾರೆ.

ವರನಟ ಡಾ. ರಾಜ್ ಕುಮಾರ್ ಹಾಡಿರುವ ಡಾ. ಹಂಸಲೇಖ ರಚಿಸಿರುವ ಹುಟ್ಟಿದ್ದರೆ ಕನ್ನಡ ನಾಡಲ್ಲಿ ಮೆಟ್ಟಿದರೆ ಕನ್ನಡ ಮಣ್ಣನ್ನು ಮೆಟ್ಟಬೇಕು' ಗೀತೆ ಹಾಡುವ ಮೂಲಕ ಕನ್ನಡ ಭಾಷೆಗೆ ನಮನ ಸಲ್ಲಿಸಲಾಯಿತು. ಈ ವಿಡಿಯೋವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com