ಹಂಪಿಯಲ್ಲಿ ಅಗ್ನಿ ಅವಘಡ: ಛತ್ರ, ಹೋಟೆಲ್, 4 ಅಂಗಡಿಗಳು ಭಸ್ಮ

ವಿಶ್ವ ವಿಖ್ಯಾತ ಹಂಪಿಯಲ್ಲಿನ 'ಮ್ಯಾಂಗೋ ಟ್ರೀ' ಹೋಟೆಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಛತ್ರ, ನಾಲ್ಕು ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. 
ಹಂಪಿಯಲ್ಲಿ ಅಗ್ನಿ ಅವಘಡ ಸಂಭವಿಸಿರುವುದು.
ಹಂಪಿಯಲ್ಲಿ ಅಗ್ನಿ ಅವಘಡ ಸಂಭವಿಸಿರುವುದು.

ಹಂಪಿ: ವಿಶ್ವ ವಿಖ್ಯಾತ ಹಂಪಿಯಲ್ಲಿನ 'ಮ್ಯಾಂಗೋ ಟ್ರೀ' ಹೋಟೆಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಛತ್ರ, ನಾಲ್ಕು ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. 

ಹೋಟೆಲ್‌ನಲ್ಲಿ ರಾತ್ರಿ ಯಾರೂ ಇಲ್ಲದ ವೇಳೆ ಸಿಲಿಂಡರ್ ಸ್ಫೋಟಗೊಂಡು ಇಡೀ ಹೋಟೆಲ್‌ ಧಗಧಗನೆ ಹೊತ್ತಿ ಉರಿದಿದೆ. ಪರಿಣಾಮ ಪಕ್ಕದ ಬಟ್ಟೆ ಮಳಿಗೆ, ಶೆಡ್ ಕೂಡ ಬೆಂಕಿ ಕೆನ್ನಾಲಿಗೆಗೆ ಸುಟ್ಟು ಹೋಗಿವೆ. ಸ್ಫೋಟದಿಂದ ಸ್ಮಾರಕಗಳಿಗೆ ಯಾವುದೇ ಹಾನಿಯಾಗಿಲ್ಲ ಎಂದು ವರದಿಗಳು ತಿಳಿಸಿವೆ.

ಹೋಟೆಲ್‌ನಲ್ಲಿ ಶಾಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡು ಸಿಲಿಂಡರ್ ಸ್ಫೋಟವಾಗಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. 

ಹೋಟೆಲ್ ನಲ್ಲಿ 7-8 ಸಿಲಿಂಡರ್ ಗಳನ್ನು ಇರಿಸಲಾಗಿತ್ತು ಎನ್ನಲಾಗಿದೆ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ದೌಡಾಯಿಸಿದ್ದು, ಸಕಾಲಕ್ಕೆ ಬೆಂಕಿ ನಂದಿಸಿದ್ದರಿಂದ ಸಂಭವಿಸಬೇಕಿದ್ದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. 

'ಮ್ಯಾಂಗೋ ಟ್ರೀ' ಹೋಟೆಲ್ ಹಂಪಿಯಲ್ಲಿ ಬಹಳ ಪ್ರಸಿದ್ಧವಾಗಿದ್ದು, ದೇಶ-ವಿದೇಶದ ಜನ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ಕೊಡುತ್ತಾರೆ. ಮೇಲಿಂದ ವಿರೂಪಾಕ್ಷ ದೇವಸ್ಥಾನಕ್ಕೆ ಈ ಹೋಟೆಲ್ ಹೊಂದಿಕೊಂಡಿದ್ದು, ಜನರಿಗೆ ಅನುಕೂಲವಾಗಿತ್ತು.

ಹೋಟೆಲ್ ಇರುವ ಪ್ರದೇಶ ಜನತಾ ಕಾಲೋನಿಯೆಂದೇ ಗುರುತಿಸಿಕೊಂಡಿದ್ದು, ಇದು ವಾಣಿಜ್ಯ ಚಟುವಟಿಕೆಗಳಿಗೆ ಹೆಸರಾಗಿದೆ. ಇಲ್ಲಿರುವ ಮಳಿಗೆಗಳನ್ನು ಸ್ಥಳಾಂತರಿಸಲು ಹಂಪಿ ಪ್ರಾಧಿಕಾರ ಮುಂದಾಗಿದ್ದು, ಕೋರ್ಟ್ ನಲ್ಲಿ ವ್ಯಾಜ್ಯ ನಡೆಯುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com