ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 102 ಸೇರಿ ಇಂದು ರಾಜ್ಯದಲ್ಲಿ 168 ಪ್ರಕರಣ ಪತ್ತೆ; ಇಬ್ಬರು ಸಾವು!

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 168 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,68,726ಕ್ಕೆ ಏರಿಕೆಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 168 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,68,726ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಇಬ್ಬರು ಸಾವನ್ನಪ್ಪಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40,256ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 102 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,74,515ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲೂ ಕೊರೋನಾದಿಂದ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 128 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 40,26,446ಕ್ಕೆ ಏರಿಕೆಯಾಗಿದೆ. ಇನ್ನು 1,982 ಸಕ್ರಿಯ ಪ್ರಕರಣಗಳಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com