ಹಾವೇರಿ: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ
ಸಾಕಷ್ಟು ಗೊಂದಲಗಳ ನಡುವೆ ಹಾವೇರಿಯಲ್ಲಿ ಮುಂದಿನ ವರ್ಷ ಜನವರಿ 6, 7 ಮತ್ತು 8 ರಂದು ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಶನಿವಾರ ಬಿಡುಗಡೆ ಮಾಡಲಾಯಿತು.
Published: 29th October 2022 07:43 PM | Last Updated: 29th October 2022 07:57 PM | A+A A-

ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ
ಹಾವೇರಿ: ಸಾಕಷ್ಟು ಗೊಂದಲಗಳ ನಡುವೆ ಹಾವೇರಿಯಲ್ಲಿ ಮುಂದಿನ ವರ್ಷ ಜನವರಿ 6, 7 ಮತ್ತು 8 ರಂದು ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಶನಿವಾರ ಬಿಡುಗಡೆ ಮಾಡಲಾಯಿತು.
ಇಂದು ಹಾವೇರಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಮ್ಮೇಳನ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನೀಲ್ ಕುಮಾರ್ ಅವರು ಕನ್ನಡ ಸಾಹಿತ್ಯ ಸಮ್ಮೇಳದ ಲಾಂಛನ ಬಿಡುಗಡೆ ಮಾಡಿದರು.
ಈ ವೇಳೆ ಶಾಸಕರಾದ ನೆಹರು ಓಲೇಕಾರ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ, ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಅವರು ಉಪಸ್ಥಿತರಿದ್ದರು.
ಇದನ್ನು ಓದಿ: ಸಮಿತಿ ರಚನೆಯಲ್ಲಿ ವಿಳಂಬ, ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನದ ಮೇಲೆ ಕರಿಛಾಯೆ
ಈ ವೇಳೆ ಮಾತನಾಡಿದ ಸಚಿವ ಸುನೀಲ್ ಕುಮಾರ್ ಅವರು, ಸಿಎಂ ತವರು ಜಿಲ್ಲೆಯಲ್ಲಿ ನಡೆಯುತ್ತಿರುವ ಸಾಹಿತ್ಯ ಸಮ್ಮೇಳನಕ್ಕೆ ಸುಮಾರು ಮೂರು ಲಕ್ಷ ಜನರು ಬರುವ ನಿರೀಕ್ಷೆಯಿದೆ. ನಗರದಲ್ಲಿ ಕನಿಷ್ಠ 25 ಸಾವಿರ ಮಂದಿಗೆ ವಸತಿ ವ್ಯವಸ್ಥೆ ಕಲ್ಪಿಸಬೇಕು. ‘ಕನಕ–ಷರೀಫ–ಸರ್ವಜ್ಞ’ ಹೆಸರಿನ ಪ್ರಧಾನ ವೇದಿಕೆ ಹಾಗೂ ‘ಪಾಪು–ಚಂಪಾ’ ಮತ್ತು ‘ಹೊಸಮನಿ ಸಿದ್ದಪ್ಪ–ಮಹದೇವ ಬಣಕಾರ’ ಹೆಸರಿನ ಎರಡು ಉಪ ವೇದಿಕೆಗಳನ್ನು ನಿರ್ಮಾಣ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.