2023ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

2022-23ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ ಶನಿವಾರ ಪ್ರಕಟಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: 2022-23ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ ಶನಿವಾರ ಪ್ರಕಟಿಸಿದೆ.

ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ, ಏಪ್ರಿಲ್ 1 ರಿಂದ ಏಪ್ರಿಲ್ 15 ರ ವರೆಗೆ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ. 

ಇಂದು ಬಿಡುಗಡೆ ಮಾಡಿರುವ ತಾತ್ಕಾಲಿಕ ವೇಳಾಪಟ್ಟಿಗೆ ವಿದ್ಯಾರ್ಥಿಗಳು ಮತ್ತು ‌ಪೋಷಕರು ಆಕ್ಷೇಪಣೆ ಸಲ್ಲಿಸಲು ನವೆಂಬರ್ 2ರ ವರೆಗೆ ಅವಕಾಶ ನೀಡಲಾಗಿದೆ.

ಏಪ್ರಿಲ್ 1 ರಂದು ಪ್ರಥಮ ಭಾಷೆ, ಏಪ್ರಿಲ್ 4 ರಂದು ಗಣಿತ, ಏಪ್ರಿಲ್ 6 ರಂದು ದ್ವಿತೀಯ ಭಾಷೆ, ಏಪ್ರಿಲ್ 10ಕ್ಕೆ ವಿಜ್ಞಾನ, ಏಪ್ರಿಲ್ 12 ರಂದು ತೃತೀಯ ಭಾಷೆ, ಏಪ್ರಿಲ್ 15 ರಂದು ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com