ಅಪ್ರಾಪ್ತೆಯರಿಗೆ ಲೈಂಗಿಕ ಕಿರುಕುಳ: ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ಸೆ.2ಕ್ಕೆ ಮುಂದೂಡಿಕೆ; ತಕರಾರು ಸಲ್ಲಿಕೆಗೆ ಅವಕಾಶ
ಚಿತ್ರದುರ್ಗ: ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಗುರಿಯಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗೆ ತಕರಾರು ಸಲ್ಲಿಸಲು ಅವಕಾಶ ಕಲ್ಪಿಸಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ವಿಚಾರಣೆಯನ್ನು ಸೆ.2 ಕ್ಕೆ ಮುಂದೂಡಿದರು.
ನಿರೀಕ್ಷಣಾ ಜಾಮೀನು ಕೋರಿ ಮುರುಘಾ ಶ್ರೀ ಪರವಾಗಿ ವಕೀಲ ಕೆ.ಎನ್.ವಿಶ್ವನಾಥಯ್ಯ ಅವರು ಆ.29ರಂದು ಅರ್ಜಿ ಸಲ್ಲಿಸಿದ್ದರು. ನ್ಯಾಯಾಧೀಶೆ ಬಿ.ಕೆ.ಕೋಮಲಾ ಅವರು ಅರ್ಜಿ ವಿಚಾರಣೆಯನ್ನು ಗುರುವಾರ ಕೈಗೆತ್ತಿಕೊಂಡರು.
ಬೆಳಿಗ್ಗೆ 11ಕ್ಕೆ ಕಲಾಪ ಆರಂಭವಾಗುತ್ತಿದ್ದಂತೆ ಅರ್ಜಿಯನ್ನು ನ್ಯಾಯಾಧೀಶರು ಕೈಗೆತ್ತಿಕೊಂಡರು. ಸಂತ್ರಸ್ತ ಬಾಲಕಿಯರನ್ನು ಕೋರ್ಟ್ ಗೆ ಹಾಜರುಪಡಿಸಲಾಯಿತು. ಸಂತ್ರಸ್ತ ಬಾಲಕಿಯರ ಪರವಾಗಿ ಹೈಕೋರ್ಟ್ ವಕೀಲ ಶ್ರೀನಿವಾಸ್ ಹಾಗೂ ಕಾನೂನು ಸೇವಾ ಪ್ರಾಧಿಕಾರದ ವಕೀಲರು ಹಾಜರಾದರು.
ಸಂತ್ರಸ್ತ ಬಾಲಕಿಯರು ಹಾಗೂ ಅವರ ತಂದೆಯ ಅಭಿಪ್ರಾಯ ಪರಿಗಣಿಸಿ ಶ್ರೀನಿವಾಸ್ ಅವರ ಅರ್ಜಿಯನ್ನು ಪರಿಗಣಿಸಿತು. ತಕರಾರು ಅಲ್ಲಿಕೆಗೆ ಒಂದು ದಿನ ಕಾಲಾವಕಾಶ ನೀಡಿ ವಿಚಾರಣೆಯನ್ನು ಮುಂದೂಡಲಾಯಿತು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ