ರಾಜ್ಯ ಸರ್ಕಾರದಿಂದ ಗ್ಲೋಬಲ್ ಸ್ಟಾರ್ಟ್ಅಪ್ ಚಾಲೆಂಜ್ ಗೆ ಚಾಲನೆ

ಉತ್ಪಾದನೆ ಮತ್ತು ಸುಸ್ಥಿರತೆ-ಸಂಬಂಧಿತ ವಲಯಗಳಲ್ಲಿ ಬೆಳವಣಿಗೆ ಹಂತದ ಸ್ಟಾರ್ಟ್‌ಅಪ್‌ಗಳನ್ನು ಗುರುತಿಸಿ ಬೆಂಬಲಿಸುವ ಗುರಿಯೊಂದಿಗೆ ರಾಜ್ಯ ಸರ್ಕಾರ ಶುಕ್ರವಾರ ಗ್ಲೋಬಲ್ ಸ್ಟಾರ್ಟ್‌ಅಪ್ ಚಾಲೆಂಜ್ - ವೆಂಚುರೈಸ್ ಗೆ ಚಾಲನೆ ನೀಡಿದೆ.
ಗ್ಲೋಬಲ್ ಸ್ಟಾರ್ಟ್ಅಪ್ ಚಾಲೆಂಜ್ ಗೆ ಚಾಲನೆ
ಗ್ಲೋಬಲ್ ಸ್ಟಾರ್ಟ್ಅಪ್ ಚಾಲೆಂಜ್ ಗೆ ಚಾಲನೆ

ಬೆಂಗಳೂರು: ಉತ್ಪಾದನೆ ಮತ್ತು ಸುಸ್ಥಿರತೆ-ಸಂಬಂಧಿತ ವಲಯಗಳಲ್ಲಿ ಬೆಳವಣಿಗೆ ಹಂತದ ಸ್ಟಾರ್ಟ್‌ಅಪ್‌ಗಳನ್ನು ಗುರುತಿಸಿ ಬೆಂಬಲಿಸುವ ಗುರಿಯೊಂದಿಗೆ ರಾಜ್ಯ ಸರ್ಕಾರ ಶುಕ್ರವಾರ ಗ್ಲೋಬಲ್ ಸ್ಟಾರ್ಟ್‌ಅಪ್ ಚಾಲೆಂಜ್ - ವೆಂಚುರೈಸ್ ಗೆ ಚಾಲನೆ ನೀಡಿದೆ.

ವೆಂಚುರೈಸ್ ಗ್ಲೋಬಲ್ ಇನ್ವೆಸ್ಟರ್ಸ್ ಮೀಟ್ - ಇನ್ವೆಸ್ಟ್ ಕರ್ನಾಟಕ 2022 ರ ಭಾಗವಾಗಿದ್ದು, ಬೆಂಗಳೂರಿನಲ್ಲಿ ನವೆಂಬರ್ 2 ರಿಂದ ನವೆಂಬರ್ 4 ರವರೆಗೆ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯಲಿದೆ.

ವೆಂಚುರೈಸ್‌' ಲೋಗೋ ಬಿಡುಗಡೆ ಮಾಡಿ ಮಾತನಾಡಿದ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಅವರು, 'ಉತ್ಪಾದನೆ ಮತ್ತು ಸಂಬಂಧಿತ ವಲಯಗಳಲ್ಲಿನ ಸ್ಟಾರ್ಟ್ ಅಪ್‌ಗಳಿಗೆ ರಾಜ್ಯವನ್ನು ಆದ್ಯತೆಯ ತಾಣವಾಗಿ ರೂಪಿಸುವುದು ನಮ್ಮ ಆದ್ಯತೆಯಾಗಿದೆ. ಉದ್ಯಮಿಗಳಿಗೆ ಪೂರಕ ವಾತಾವರಣ ಕಲ್ಪಿಸಲು ಅತ್ಯುತ್ತಮ ಮೂಲ ಸೌಕರ್ಯ ನಿರ್ಮಿಸಲು ನಮ್ಮ ಸರ್ಕಾರ ಬದ್ಧ' ಎಂದು ಹೇಳಿದರು.

ಮುಂದಿನ ಎರಡು ತಿಂಗಳ ಅವಧಿಯಲ್ಲಿ ನಡೆಯಲಿರುವ ಈ ಸ್ಪರ್ಧೆಯ ಮೊದಲ ಹಂತ ಆನ್‌ಲೈನ್ ಅರ್ಜಿ ಸಲ್ಲಿಕೆ. ಆನ್‌ಲೈನ್ ಪಿಚಿಂಗ್ ಎರಡನೇ ಭಾಗವಾದರೆ, ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಅಂತಿಮ ಸುತ್ತಿನ ಸ್ಪರ್ಧೆ ನಡೆಯಲಿದೆ. 

ಸ್ಪರ್ಧೆಯ ವಿಜೇತರಿಗೆ 100,000 ಡಾಲರ್‌ ನಗದು ಬಹುಮಾನ ಘೋಷಿಸಲಾಗಿದೆ. ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಭಾಗಿಯಾಗುವ ಅವಕಾಶದ ಜತೆಗೆ, ಹೂಡಿಕೆದಾರರು ಹಾಗೂ ಮಾರ್ಗದರ್ಶಕರ ಜತೆ ಮಾತುಕತೆಗೆ ಅವಕಾಶ ಕಲ್ಪಿಸಲಾಗುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com