ಏಯ್ ಬಾಯಿ ಮುಚ್ಚು! ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆ ಮೇಲೆ ಶಾಸಕ ಅರವಿಂದ ಲಿಂಬಾವಳಿ ದರ್ಪ?

ಸಮಸ್ಯೆ ಹೇಳಿಕೊಳ್ಳಲು ಬಂದಿದ್ದ ಮಹಿಳೆ ಮೇಲೆಯೇ ಆವಾಜ್​ ಹಾಕಿ ಶಾಸಕ ಅರವಿಂದ ಲಿಂಬಾವಳಿ ದರ್ಪ ಮೇರೆದಿರುವ ಘಟನೆ ನಡೆದಿದೆ.
ಮಹಿಳೆ ಜೊತೆ ಅರವಿಂದ ಲಿಂಬಾವಳಿ
ಮಹಿಳೆ ಜೊತೆ ಅರವಿಂದ ಲಿಂಬಾವಳಿ
Updated on

ಬೆಂಗಳೂರು: ಸಮಸ್ಯೆ ಹೇಳಿಕೊಳ್ಳಲು ಬಂದಿದ್ದ ಮಹಿಳೆ ಮೇಲೆಯೇ ಆವಾಜ್​ ಹಾಕಿ ಶಾಸಕ ಅರವಿಂದ ಲಿಂಬಾವಳಿ ದರ್ಪ ಮೇರೆದಿರುವ ಘಟನೆ ನಡೆದಿದೆ.

ಶಾಸಕರು ಗುರುವಾರ ವರ್ತೂರು ಕೆರೆ ಕೋಡಿ ವೀಕ್ಷಣೆ ಮಾಡಲು ತೆರಳಿದ ಮೇಳೆ ಘಟನೆ ನಡೆದಿದೆ. ಅಧಿಕಾರಿಗಳ ಜೊತೆ ಮಳೆ ಹಾನಿ ಪ್ರದೇಶ ವೀಕ್ಷಣೆಗೆ ತೆರಳಿದ್ದ ಶಾಸಕ ಅರವಿಂದ್ ಲಿಂಬಾವಳಿಯಿಂದ ಅಮಾಯಕ ಮಹಿಳೆ ಮೇಲೆ ದರ್ಪ ಮೇರೆದಿದ್ದಾರೆ.

ಮಳೆ ಅನಾಹುತ ಪ್ರದೇಶವಾದ ವರ್ತೂರು ಕೆರೆ ಕೋಡಿ ವೀಕ್ಷಿಸಲು ಅಧಿಕಾರಿಗಳ ಜೊತೆ ಅರವಿಂದ ಲಿಂಬಾವಳಿ ಬಂದಿದ್ದರು. ಈ ವೇಳೆ ಸಮಸ್ಯೆ ಹೇಳಲು ಬಂದ ಮಹಿಳೆಗೆ, ನಿನಗೆ ಮಾನ ಮರ್ಯಾದೆ ಇದ್ಯಾ? ನಿನಗೆ ನಾಚಿಕೆ ಆಗಲ್ವಾ ಎಂದು ಏರು ದನಿಯಲ್ಲಿ ಅವಾಜ್ ಹಾಕಿದ್ದಾರೆ. ನಂತರ ಮಹಿಳೆಯನ್ನು ಸ್ಟೇಷನ್‍ಗೆ ಕರೆದುಕೊಂಡು ಹೋಗಿ ಕೂರಿಸಿ ಎಂದು ಕಿಡಿಕಾರಿದ್ದಾರೆ.

ಇದೀಗ ಶಾಸಕ ಅರವಿಂದ ಲಿಂಬಾವಳಿಯಿಂದ ನಿಂದನೆಗೆ ಒಳಗಾಗಿದ್ದ ಮಹಿಳೆಯ ಮೇಲೆ ಬಿಬಿಎಂಪಿ ಎಂಜಿನಿಯರ್ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ. ಬಿಬಿಎಂಪಿ ಅಧಿಕಾರಿಗಳು ಒತ್ತುವರಿ ವಿಚಾರಕ್ಕೆ ಕ್ರಮ ಕೈಗೊಳ್ಳಲು ಹೋದಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂದು ಮಹಿಳೆ ವಿರುದ್ಧ ಆರೋಪಿಸಲಾಗಿದೆ.

ಅಹವಾಲು ಹೇಳಿಕೊಳ್ಳಲು ಬಂದ ಮಹಿಳೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಶಾಸಕ ಅರವಿಂದ ಲಿಂಬಾವಳಿ ವಿರುದ್ಧ ಆಮ್‌ ಆದ್ಮಿ ಪಕ್ಷದ ರಾಜ್ಯ ಘಟಕ ಟೀಕಿಸಿದೆ. ‘ಏಕೆ ಇಷ್ಟು ದರ್ಪ?’ ಎಂದು ಪ್ರಶ್ನೆ ಮಾಡಿದೆ. ಶಾಸಕರು ಮಹಿಳೆಯೊಂದಿಗೆ ಏರುಧ್ವನಿಯಲ್ಲಿ ಮಾತನಾಡುತ್ತಿರುವ ವಿಡಿಯೊವನ್ನು ಹಂಚಿಕೊಂಡಿರುವ ಎಎಪಿ, ತೀವ್ರ ಟೀಕೆ ಮಾಡಿದೆ. ‘ಇದೇನಿದು ಅರವಿಂದ ಲಿಂಬಾವಳಿ ಅವರೇ? ಒಂದು ಹೆಣ್ಣಿನೊಂದಿಗೆ ನಡೆದುಕೊಳ್ಳುವ ರೀತಿಯೇ ಇದು? ತಪ್ಪಿದ್ದರೆ ಕಾನೂನಿದೆ. ಇದೇನು ನಿಮ್ಮ ಮಾತುಗಳು? ನಿಮ್ಮ ಸ್ಥಾನಕ್ಕೆ ಶೋಭೆ ತರುವುದೆ? ಅಧಿಕಾರ ಶಾಶ್ವತ ಅಲ್ಲ, ಅದೇತಕೆ ಇಷ್ಟು ದರ್ಪ?’ ಎಂದು ಪ್ರಶ್ನೆ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com