ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 526 ಸೇರಿ ರಾಜ್ಯದಲ್ಲಿ 941 ಮಂದಿಗೆ ಪಾಸಿಟಿವ್; 1 ಸಾವು

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 941 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,54,146ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 941 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,54,146ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಒಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40203ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 526 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1866248ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಯಾವುದೇ ಕೊರೋನಾ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 788 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4008698ಕ್ಕೆ ಏರಿಕೆಯಾಗಿದೆ. ಇನ್ನು 5203 ಸಕ್ರಿಯ ಪ್ರಕರಣಗಳಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com