ಧಾರವಾಡದಲ್ಲಿ ಎನ್‌ಡಿಎ ಮಾದರಿಯ ಪೊಲೀಸ್ ತರಬೇತಿ ಕೇಂದ್ರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

"ಧಾರವಾಡದಲ್ಲಿರುವ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ಆವರಣದಲ್ಲಿ ಪುಣೆಯ ಖಡಕ್‌ವಾಸ್ಲಾದ ಎನ್.ಡಿ.ಎ.ಮಾದರಿಯ ತರಬೇತಿ ಕೇಂದ್ರ  ಸ್ಥಾಪಿಸಲಾಗುವುದು- ಸಿಎಂ ಬೊಮ್ಮಾಯಿ.
ದಕ್ಷಿಣ ಸಂಚಾರ ಪೊಲೀಸ್ ಠಾಣೆಗಳ ಉದ್ಘಾಟನೆ ಮತ್ತು ಗೋಕುಲ ರಸ್ತೆ,ವಿದ್ಯಾನಗರ ಹಾಗೂ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಗಳ ಶಂಕುಸ್ಥಾಪನೆ ನೆರವೇರಿಸಿದ ಸಿಎಂ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ದಕ್ಷಿಣ ಸಂಚಾರ ಪೊಲೀಸ್ ಠಾಣೆಗಳ ಉದ್ಘಾಟನೆ ಮತ್ತು ಗೋಕುಲ ರಸ್ತೆ,ವಿದ್ಯಾನಗರ ಹಾಗೂ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಗಳ ಶಂಕುಸ್ಥಾಪನೆ ನೆರವೇರಿಸಿದ ಸಿಎಂ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: "ಧಾರವಾಡದಲ್ಲಿರುವ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ಆವರಣದಲ್ಲಿ ಪುಣೆಯ ಖಡಕ್‌ವಾಸ್ಲಾದ ಎನ್.ಡಿ.ಎ.ಮಾದರಿಯ ತರಬೇತಿ ಕೇಂದ್ರ ಸ್ಥಾಪಿಸಲಾಗುವುದು. ತಂತ್ರಜ್ಞಾನ, ವಿಜ್ಞಾನ ಆಧರಿಸಿ ಸೈಬರ್ ಅಪರಾಧಗಳ ತ್ವರಿತ ಪತ್ತೆ ಮಾಡುವ ಕೌಶಲ್ಯವನ್ನು ಪೊಲೀಸರು ಬೆಳೆಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಸುಧಾರಣೆಗಳನ್ನು ತರಲಾಗುತ್ತಿದೆ" ಎಂದು ಸಿಎಂ ಹೇಳಿದರು.

ಕಸಬಾಪೇಟ ಹಾಗೂ ದಕ್ಷಿಣ ಸಂಚಾರ ಪೊಲೀಸ್ ಠಾಣೆಗಳ ಉದ್ಘಾಟನೆ ಮತ್ತು ಗೋಕುಲ ರಸ್ತೆ,ವಿದ್ಯಾನಗರ ಹಾಗೂ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಗಳ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

"ಮಧ್ಯಮ ಕ್ರಮಾಂಕದ ಪೊಲೀಸ್ ಅಧಿಕಾರಿಗಳಿಗೆ ತರಬೇತಿ ನೀಡಲು ಪುಣೆಯ ಖಡಕ್‌ವಾಸ್ಲಾದಲ್ಲಿರುವ  ಎನ್ ಡಿ ಎ ಮಾದರಿಯ ತರಬೇತಿ ಕೇಂದ್ರವನ್ನು ಧಾರವಾಡದಲ್ಲಿ ಸ್ಥಾಪಿಸಲಾಗುವುದು. ಹುಬ್ಬಳ್ಳಿಯಲ್ಲಿ ಟ್ರಾಫಿಕ್ ಕಂಟ್ರೋಲ್ ಕಮಾಂಡ್ ಸೆಂಟರ್ ಸ್ಥಾಪನೆಗೆ ಸ್ಮಾರ್ಟ್ ಸಿಟಿ ಯೋಜನೆಯಡಿ ಹಣ ಒದಗಿಸಬಹುದು.ಸೂಕ್ತ ಪ್ರಸ್ತಾವನೆ ಬಂದರೆ ರಾಜ್ಯ ಸರ್ಕಾರದಿಂದ ಹಣ ಒದಗಿಸಲಿದೆ .ತಂತ್ರಜ್ಞಾನದ ದುರುಪಯೋಗ ತಡೆಯಬೇಕು.ಡಿಜಿಟಲ್ ಹಾಗೂ ಸೈಬರ್ ಅಪರಾಧಗಳ ಪತ್ತೆ ಕಾರ್ಯದಲ್ಲಿ ಇನ್ನೂ ಸುಧಾರಣೆ ತರಲಾಗುವುದು" ಎಂದು ಸಿಎಂ ಮಾಹಿತಿ ನೀಡಿದರು. 

ಹುಬ್ಬಳ್ಳಿಯ ಜನದಟ್ಟಣೆ ಹಾಗೂ ವಾಹನ ದಟ್ಟಣೆ ನಿಯಂತ್ರಣಕ್ಕೆ ಸಂಚಾರ ಪೊಲೀಸ್ ಠಾಣೆಗಳ ಅಗತ್ಯತೆ ಮನಗಂಡು ಅಲ್ಲಿ ಠಾಣೆ ಸ್ಥಾಪಿಸಲಾಗಿದೆ.ಅಭಿವೃದ್ಧಿಯ ವಿಷಯದಲ್ಲಿ ಅಧಿಕಾರಿಗಳು ಸಕಾರಾತ್ಮಕವಾಗಿ ಕ್ರಿಯಾಶೀಲವಾಗಿ ಕರ್ತವ್ಯ ನಿರ್ವಹಿಸಬೇಕು. ಕಾನೂನು ಚೌಕಟ್ಟಿನಲ್ಲಿ ಜನರಿಗೆ ನೆರವು ನೀಡಲು ಅಧಿಕಾರಿಗಳು ಹಿಂದೇಟು ಹಾಕಬಾರದು. 2025 ರೊಳಗೆ 11 ಸಾವಿರ ಪೊಲೀಸ್ ವಸತಿ ಗೃಹಗಳ ನಿರ್ಮಾಣದ ಗುರಿ ಹೊಂದಲಾಗಿದೆ. ಪ್ರಸಕ್ತ ಸಾಲಿನಲ್ಲಿ 2 ಸಾವಿರ ವಸತಿ ಗೃಹಗಳು ತಲೆ ಎತ್ತಲಿವೆ.ಕರ್ನಾಟಕ ರಾಜ್ಯ ಅಸ್ತಿತ್ವಕ್ಕೆ ಬಂದ ನಂತರ ಒಂದೇ ವರ್ಷದ ಅವಧಿಯಲ್ಲಿ 117 ಪೊಲೀಸ್ ಠಾಣೆಗಳನ್ನು ನಿರ್ಮಿಸಲಾಗಿದೆ. 

8101 ಶಾಲೆಗಳ ಕಟ್ಟಡಗಳನ್ನು ಮುಂದಿನ ಐದು ವರ್ಷಗಳ ಅವಧಿಯಲ್ಲಿ ನಿರ್ಮಿಸುವ ಗುರಿ ಹೊಂದಲಾಗಿದೆ. ತಲಾ 7 ಕೋಟಿ ರೂ.ವೆಚ್ಚದಲ್ಲಿ ರಾಜ್ಯದಲ್ಲಿ 81 ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ನಿರ್ಮಿಸಲು ಕ್ರಮವಹಿಸಲಾಗಿದೆ.ಬಿಯಾಂಡ್ ಬೆಂಗಳೂರು ಕಾರ್ಯಕ್ರಮದಡಿ ಹುಬ್ಬಳ್ಳಿ ಧಾರವಾಡ ಅವಳಿ ನಗರಗಳೂ ಸೇರಿ ಎರಡನೇ ಹಂತದ  ಒಟ್ಟು ಆರು  ನಗರಗಳಿಗೆ ಹೊಂದಿಕೊಂಡು ವಿಸ್ತೃತ ಹೊಸ ನಗರಗಳನ್ನು ನಿರ್ಮಿಸಲಾಗುವುದು.ಹುಬ್ಬಳ್ಳಿಯಲ್ಲಿ ಜಯದೇವ ಹೃದ್ರೋಗ ಪ್ರಾದೇಶಿಕ ಕೇಂದ್ರದ ಸ್ಥಾಪನೆಗೆ ಶೀಘ್ರ ಟೆಂಡರ್ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com