`ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 355 ಸೇರಿ ರಾಜ್ಯದಲ್ಲಿಂದು 592 ಹೊಸ ಪ್ರಕರಣ ಪತ್ತೆ, 2 ಸಾವು

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 592 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಒಟ್ಟಾರೇ ಸೋಂಕಿತರ ಸಂಖ್ಯೆ 40,55,822ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 592 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಒಟ್ಟಾರೇ ಸೋಂಕಿತರ ಸಂಖ್ಯೆ 40,55,822ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 889 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 40,10,998ಕ್ಕೆ ಏರಿಕೆಯಾಗಿದೆ. ಇನ್ನು 4573 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಇಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಒಟ್ಟು ಸಾವಿನ ಸಂಖ್ಯೆ 40,209ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 355 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಒಟ್ಟಾರೇ ಸೋಂಕಿತರ ಸಂಖ್ಯೆ 18,67,191ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಯಾವುದೇ ಕೊರೋನಾ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com